ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್……
ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಶಾಲಾ ಬಸ್ ಹರಿದ ಘಟನೆ ಗೋಕಾಕ ತಾಲೂಕಿನ ಮಲ್ಲಾಪುರ ಪಿಜಿ ತೋಟದ ಹತ್ತಿರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದರ.
ಶಾಲಾ ಬಸ್ ಚಾಲಕನ ದಿವ್ಯ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ.
ರಸ್ತೆ ಬದಿಯಲ್ಲಿ ಸೈಕಲ್ ಮೇಲೆ ಶಾಲೆಗೆ ಹೋಗುತ್ತಿದ್ದ ಉಜ್ವಲ ಹುಲಿಕಟ್ಟಿ ಎಂಬ ವಿದ್ಯಾರ್ಥಿನಿಗೆ ವೇಗವಾಗಿ ಬಂದ ಶಾಲಾ ಬಸ್ ಡಿಕ್ಕಿ ಹೊಡೆದು ಮೇಲೆಯೇ ಹರಿದಿದೆ. ವಿದ್ಯಾರ್ಥಿನಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ…..
Laxmi News 24×7