Breaking News

ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಭಗವಾನ್ ರೆಡ್ಡಿ ಬಂಧನ ವಿರೋಧಿ ಪ್ರತಿಭಟನೆ…

Spread the love

ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಭಗವಾನ್ ರೆಡ್ಡಿ ಬಂಧನ ವಿರೋಧಿ ಪ್ರತಿಭಟನೆ…. ಧಾರವಾಡದ ಮುಮ್ಮುಗಟ್ಟಿ ಗ್ರಾಮದಲ್ಲಿ ಎಐಕೆಕೆಎಮ್‌ಎಸ್ ಸಂಘಟನೆ ನೇತೃತ್ವದಲ್ಲಿ ಆಕ್ರೋಶ..
 ಕಾಮ್ರೇಡ್ ಭಗವಾನ್ ರೆಡ್ಡಿ ಹಾಗೂ ಇತರ ನಾಯಕರ ಬಂಧಿಸಿರುವ ನಡೆ ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಧಾರವಾಡದ‌ ಮುಮ್ಮಿಗಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ AIKKMS ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.‌
ಧಾರವಾಡ ತಾಕೂಕಿನ ಮುಮ್ಮಿಗಟ್ಟಿ ಗ್ರಾಮದ ಬಾಣೆ ಕರಿಯಮ್ಮದೇವಿ ದೇವಸ್ಥಾನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಬಂಧನ ಖಂಡಿಸಿ‌ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ತನ್ನ ಅಖಿಲ ಭಾರತ ಕಾರ್ಯದರ್ಶಿ ಮಂಡಳಿ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿಯಾದ ಕಾಮ್ರೇಡ್ ಭಗವಾನ್ ರೆಡ್ಡಿ ಅವರ ಬಂಧನವನ್ನು ತೀವ್ರವಾಗಿ ಖಂಡಿಸುತ್ತದೆ.
ಕಾಮ್ರೇಡ್ ಭಗವಾನ್ ರೆಡ್ಡಿ ಅವರು ವಿಜಯಪುರ ಹೋರಾಟ ಸಮಿತಿಯ ಕಾರ್ಯಕಾರಿ ಸಮಿತಿ ಮತ್ತು ಕೋರ್ ಕಮಿಟಿ ಸದಸ್ಯರಾಗಿದ್ದು, ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ, ಸರ್ಕಾರ ಜಾರಿಗೊಳಿಸಲು ಹೊರಟಿರುವ ಸಾರ್ವಜನಿಕ–ಖಾಸಗಿ ಸಹಭಾಗಿತ್ವ ppp ಮಾದರಿಯನ್ನು ವಿರೋಧಿಸುವ ದೀರ್ಘಕಾಲೀನ ಜನಾಂದೋಲನವನ್ನು ಮುನ್ನಡೆಸುತ್ತಿರುವ ಪ್ರಮುಖ ನಾಯಕರಾಗಿದ್ದಾರೆ.
ಸರ್ಕಾರ ಜನರ ನ್ಯಾಯಸಮ್ಮತ ಬೇಡಿಕೆಗಳನ್ನು ನಿರಂತರವಾಗಿ ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ, ಹಲವು ದಿನಗಳಿಂದ ಶಾಂತಿಯುತ ಹಾಗೂ ಪ್ರಜಾಸತ್ತಾತ್ಮಕ ಹೋರಾಟ ನಡೆಯುತ್ತಿತ್ತು.
ಈ ಚಳವಳಿಗೆ ವಿಜಯಪುರ ಜಿಲ್ಲೆಾದ್ಯಂತ ವ್ಯಾಪಕ ಜನಬೆಂಬಲ ಲಭಿಸಿತ್ತು. ವಿಜಯಪುರದ ಇನ್‌ಚಾರ್ಜ್ ಸಚಿವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ, ಕಾಮ್ರೇಡ್ ಭಗವಾನ್ ರೆಡ್ಡಿ ಹಾಗೂ ಇತರ ನಾಯಕರನ್ನು ಪೊಲೀಸರು ಅಕ್ರಮವಾಗಿ ಬಂಧಿಸಿ, IPC 307 ಸೇರಿದಂತೆ ಗಂಭೀರ ಹಾಗೂ ಜಾಮೀನುರಹಿತ ಸೆಕ್ಷನ್‌ಗಳನ್ನು ಒಳಗೊಂಡ ಸುಳ್ಳು ಮತ್ತು ಕೃತಕ ಪ್ರಕರಣಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವಿಜಯಪುರದಲ್ಲಿ ಪ್ರತಿಭಟನಾ ಹಕ್ಕನ್ನು ಹತ್ತಿಕುವ ಕೆಲಸವಾಗುತ್ತಿದೆ. ಈ ಕೂಡಲೇ ಬಂಧನವಾಗಿ ನಾಯಕರ ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ