Breaking News

ಪ್ರಧಾನಿ ಮೋದಿಗೆ ಡಾಕ್ಟರೇಟ್ ಕೊಟ್ಟಿದೆ. ಡೊನಾಲ್ಡ್​ ಟ್ರಂಪ್ ಅಮೆರಿಕದಲ್ಲಿ ಸೋಲೋದಕ್ಕೆ ಓಟ್ ಕೊಡಿಸಿದರಲ್ಲ ಅದಕ್ಕೇ ಮೋದಿಗೆ ಅವಾರ್ಡ್ ಕೊಟ್ಟಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ. ರಾಮಲಿಂಗಾ ರೆಡ್ಡಿ

Spread the love

ಬೆಂಗಳೂರು (ಜನವರಿ 03); ಬಿಜೆಪಿ ಈ ಹಿಂದೆ ‘ಮನು’ವಾದವನ್ನು  ಅನುಸರಣೆ ಮಾಡುತ್ತಿತ್ತು. ಆದರೆ, ಇದಿಗ ಬಿಜೆಪಿ ನಾಯಕರು ‘ಮನಿ’ವಾದವನ್ನು ಅನುಸರಿಸುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿ ನಡೆಯುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯದ ಎಲ್ಲಾ ಬಿಜೆಪಿ ನಾಯಕರೂ ಡೋಂಗಿಗಳೇ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್​ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತೀಚೆಗೆ ಅಮೆರಿಕ ಮೂಲದ ಸಂಸ್ಥೆಯೊಂದು ಡಾಕ್ಟರೇಟ್​ ಗೌರವ ಘೋಷಿಸಿತ್ತು. ಈ ಕುರಿತು ಅಪಹಾಸ್ಯ ಮಾಡಿ ಮಾತನಾಡಿರುವ ರಾಮಲಿಂಗಾ ರೆಡ್ಡಿ, “ಯಡಿಯೂರಪ್ಪಗೆ ಡಾಕ್ಟರೇಟ್ ಕೊಟ್ಟಿದ್ದು ಯಾರು..? ಹೀಗಾಗಿಯೇ ಬಿಎಸ್​ವೈ ಡಾಕ್ಟರ್ ಯಡಿಯೂರಪ್ಪ ಅಂತ ಹಾಕಿಕೊಳ್ಳೋದನ್ನೇ ಬಿಟ್ರು, ಅಂತಹ ಕಂಪನಿ ಇದೀಗ ಪ್ರಧಾನಿ ಮೋದಿಗೆ ಡಾಕ್ಟರೇಟ್ ಕೊಟ್ಟಿದೆ. ಡೊನಾಲ್ಡ್​ ಟ್ರಂಪ್  ಅಮೆರಿಕದಲ್ಲಿ ಸೋಲೋದಕ್ಕೆ ಓಟ್ ಕೊಡಿಸಿದರಲ್ಲ ಅದಕ್ಕೇ ಮೋದಿಗೆ ಅವಾರ್ಡ್ ಕೊಟ್ಟಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿಯವರು ಎಂದರೆ ಡೋಂಗಿಗಳು ಎಂದು ಕಿಡಿಕಾರಿ ಭ್ರಷ್ಟಾಚಾರದ ವಿರುದ್ಧ ದ್ವನಿ ಎತ್ತಿರುವ ರಾಮಲಿಂಗಾ ರೆಡ್ಡಿ, “ರಾಜ್ಯ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದೆ. ಯಾವ ಕಚೇರಿಗೆ ಹೋದರೂ ದುಡ್ಡಿಲ್ಲದೇ ಕೆಲಸ ಆಗುತ್ತಿಲ್ಲ. ಈ ಹಿಂದೆ ಇರಲಿಲ್ಲ ಎಂದಲ್ಲ, ಆದರೆ, ಅದಕ್ಕೊಂದು ಲಿಮಿಟ್ ಇತ್ತು. ಆದರೆ, ಈಗ ಭ್ರಷ್ಟಾಚಾರದ ಲಿಮಿಟ್ ಮೀರಿ ನಡೆಯುತ್ತಿದೆ” ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ

Spread the loveಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ