Breaking News

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ

Spread the love

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ
‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ
ಹಿಂದೂಗಳ ರಕ್ಷಣೆಗಾಗಿ ರಾಷ್ಟ್ರಪತಿಗಳ ಹಸ್ತಕ್ಷೇಪಕ್ಕೆ ಆಗ್ರಹ
ಅಲ್ಪಸಂಖ್ಯಾತ ಹಿಂದೂಗಳ ಸುರಕ್ಷತೆಗಾಗಿ ಜಾಗತಿಕ ಮಟ್ಟದಲ್ಲಿ ಒತ್ತಡ ಹೇರಲು ಮನವಿ
ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ರಾಷ್ಟ್ರಪತಿಗಳಿಗೆ ಉದ್ದೇಶಿಸಿರುವ ಮನವಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು.
ಬಾಂಗ್ಲಾದೇಶದ ಹಿಂದೂ ನಾಗರಿಕ ದೀಪು ಚಂದ್ರ ದಾಸ್ ಅವರ ಭೀಕರ ಹತ್ಯೆಯು ಹಿಂದೂಗಳ ವಿರುದ್ಧ ನಡೆಯುತ್ತಿರುವ ಧಾರ್ಮಿಕ ದ್ವೇಷ ಮತ್ತು ಸಂಘಟಿತ ಹಿಂಸಾಚಾರದ ಭಾಗವಾಗಿದೆ ಎಂದು ಸಂಘಟನೆಯು ಮನವಿಯಲ್ಲಿ ತಿಳಿಸಿದೆ.ಬಾಂಗ್ಲಾದೇಶದಲ್ಲಿ ಕಳೆದ ಹಲವು ದಶಕಗಳಿಂದ ಹಿಂದೂಗಳ ಹತ್ಯೆ, ಅತ್ಯಾಚಾರ, ಅಪಹರಣ, ಮತಾಂತರ ಮತ್ತು ದೇವಾಲಯಗಳ ಧ್ವಂಸ ಪ್ರಕರಣಗಳು ನಡೆಯುತ್ತಿವೆ.
ಬಾಂಗ್ಲಾದೇಶ ಸರ್ಕಾರವು ತನ್ನ ಹಿಂದೂ ನಾಗರಿಕರನ್ನು ರಕ್ಷಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಅಲ್ಲಿ ಭಯ ಮತ್ತು ಅರಾಜಕತೆಯ ವಾತಾವರಣ ನಿರ್ಮಾಣವಾಗಿದೆ. ಇದು ಹಿಂದೂಗಳ ಅಸ್ತಿತ್ವವನ್ನೇ ಅಳಿಸಿಹಾಕುವ ವ್ಯವಸ್ಥಿತ ಪಿತೂರಿಯಾಗಿದೆ.ಈ ಅಮಾನವೀಯ ಕೃತ್ಯಗಳನ್ನು ತಡೆಯಲು ಮತ್ತು ಹಿಂದೂಗಳ ರಕ್ಷಣೆಗಾಗಿ ಭಾರತ ಸರ್ಕಾರವು ಜಾಗತಿಕ ಮಟ್ಟದಲ್ಲಿ ರಾಜತಾಂತ್ರಿಕ ಒತ್ತಡವನ್ನು ತರಬೇಕು ಎಂದು ಹಮಾರಾ ದೇಶ್ ಸಂಘಟನೆಯ ಸದಸ್ಯರು ಈ ಸಂದರ್ಭದಲ್ಲಿ ಆಗ್ರಹಿಸಿದರು.

 


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ