Breaking News

23ನೇ ಚಿತ್ರಸಂತೆ ಉದ್ಘಾಟನೆ: ಸಿಎಂ ಚಿತ್ರ ಬಿಡಿಸಿ ಗಿಫ್ಟ್ ಕೊಟ್ಟ ಕಲಾವಿದರು- ಫೋಟೋಗಳು

Spread the love

ಬೆಂಗಳೂರು: ನಗರದ ಕುಮಾರಕೃಪಾ ರಸ್ತೆಯಲ್ಲಿನ ಚಿತ್ರಕಲಾ ಪರಿಷತ್​​ನಲ್ಲಿ ಆಯೋಜಿಸಿರುವ ಪ್ರತಿಷ್ಟಿತ 23ನೇ ಚಿತ್ರಸಂತೆಯನ್ನು ಕ್ವಾನ್ವಸ್ ಮೇಲೆ ಬರೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಈ ಮೂಲಕ 8ನೇ ಬಾರಿ ಚಿತ್ರಸಂತೆಗೆ ಅವರು ಚಾಲನೆ ನೀಡಿದಂತಾಯಿತು.

ಬಳಿಕ ಮಾತನಾಡಿದ ಸಿಎಂ, “ಅತ್ಯಂತ ಸಂತೋಷದಿದ 23ನೇ ಚಿತ್ರಸಂತೆ ಉದ್ಘಾಟಿಸಿದ್ದೇನೆ. ಇದು ನಾನು 8ನೇ ಬಾರಿ ಚಿತ್ರಸಂತೆಯಲ್ಲಿ ಭಾಗವಹಿಸುತ್ತಿರುವುದು. ಕಲಾವಿದರನ್ನು ಪ್ರೋತ್ಸಾಹಿಸಲು ಚಿತ್ರ ಪ್ರದರ್ಶನ ಹಾಗೂ ಮಾರಾಟದ ವೇದಿಕೆಯನ್ನು ಚಿತ್ರಕಲಾ ಪರಿಷತ್ ಅನೇಕ ವರ್ಷದಿಂದ ಮಾಡುತ್ತಿದೆ. 2003ರಲ್ಲಿ ಆರಂಭವಾಗಿದ್ದ ಚಿತ್ರಸಂತೆ ಇದೀಗ 23ನೇ ಚಿತ್ರಸಂತೆಯಾಗಿದೆ. 22 ರಾಜ್ಯ ಹಾಗೂ 4 ಕೇಂದ್ರಾಡಳಿತ ಪ್ರದೇಶದ ಕಲಾವಿದರು ಭಾಗಿಯಾಗಿದ್ದಾರೆ. ಕಲಾವಿದರು, ಜನರು ಸೇರಲು ಒಂದು ವೇದಿಕೆ ಬೇಕಾಗುತ್ತದೆ. ಅದನ್ನು ಚಿತ್ರಕಲಾ ಪರಿಷತ್ ಮಾಡ್ತಿದೆ. ನಾವು ಸಹಾಯ ಮಾಡುತ್ತಾ ಬಂದಿದ್ದೇವೆ. ಮುಂದೆಯೂ ಸಹಾಯ ಮಾಡ್ತೇವೆ” ಎಂದು ಭರವಸೆ ನೀಡಿದರು.”ಕಲೆ ರಾಜ್ಯದ ಸಂಸ್ಕೃತಿಯ ಕೈಗನ್ನಡಿ ಎಂದು ರವಿವರ್ಮಾ ಹೇಳಿದ್ದರು. ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಅವರು, ಮ್ಯೂಸಿಯಂ ಮಾಡಬೇಕು ಅಂತ ಹೇಳಿದ್ದಾರೆ. ಅದನ್ನು ನಾವು ಸ್ವಾಗತಿಸುತ್ತೇವೆ. ಈ ವರ್ಷದ ಚಿತ್ರಸಂತೆಯನ್ನು ಪರಿಸರಕ್ಕೆ ಸಮರ್ಪಿಸಲಾಗಿದೆ. ನಾವು ಪರಿಸರ ರಕ್ಷಣೆ ಮಾಡಿದರೆ, ಪರಿಸರ ನಮ್ಮ ರಕ್ಷಣೆ ಮಾಡುತ್ತದೆ. ಬೆಂಗಳೂರಲ್ಲಿ ವಾಯುಮಾಲಿನ್ಯ ಜಾಸ್ತಿ ಆಗ್ತಿದೆ. ದೆಹಲಿಯಲ್ಲಿ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನಾವೆಲ್ಲರೂ ಪರಿಸರ ರಕ್ಷಣೆ ಮಾಡಬೇಕು” ಎಂದು ಕರೆ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ