Breaking News

ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ

Spread the love

ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ ನಿರ್ಮಾಣಕ್ಕೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ
ಕಡೋಲಿಯಲ್ಲಿ ನೂತನ ಪಶು ಚಿಕಿತ್ಸಾಲಯ
ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶಂಕು ಸ್ಥಾಪನೆ
ನಬಾರ್ಡ್ ಆರ್‌.ಐ‌.ಡಿ‌.ಎಫ್‌.–30 ಯೋಜನೆ
ರೂ. 48.34 ಲಕ್ಷ ವೆಚ್ಚದಲ್ಲಿ ಕಾಮಗಾರಿ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಅಂದಾಜು ರೂ. 48.34 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪಶು ಚಿಕಿತ್ಸಾಲಯ ಕಟ್ಟಡದ ಭೂಮಿ ಪೂಜೆಯನ್ನು ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ನೆರವೇರಿಸಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ನಬಾರ್ಡ್ ಆರ್‌.ಐ‌.ಡಿ‌.ಎಫ್‌.–30 ಯೋಜನೆಯಡಿ ಅಂದಾಜು ರೂ. 48.34 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪಶು ಚಿಕಿತ್ಸಾಲಯ ಕಟ್ಟಡದ ಭೂಮಿ ಪೂಜೆಯನ್ನು ಗ್ರಾಮದ ಹಿರಿಯರು, ಮುಖಂಡರು ಹಾಗೂ ಸಾರ್ವಜನಿಕರ ಜೊತೆಗೆ ನೆರವೇರಿಸಲಾಯಿತು.
ಸಚಿವರೂ ಆಗಿರುವ ಈ ಭಾಗದ ಜನಪ್ರಿಯ ಶಾಸಕರಾದ ಸತೀಶ ಜಾರಕಿಹೊಳಿಯವರ ಸಮರ್ಥ ನೇತೃತ್ವದಲ್ಲಿ ಯಮಕನಮರಡಿ ಕ್ಷೇತ್ರವು ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿದ್ದು, ಇಂದು ಮಾದರಿ ಕ್ಷೇತ್ರವಾಗಿ ರೂಪುಗೊಂಡಿದೆ. ಈ ಪಶು ಚಿಕಿತ್ಸಾಲಯದ ನಿರ್ಮಾಣದಿಂದ ಗ್ರಾಮೀಣ ಭಾಗದ ಪಶುಪಾಲಕರಿಗೆ ಅಗತ್ಯವಾದ ಗುಣಮಟ್ಟದ ಪಶುವೈದ್ಯಕೀಯ ಸೇವೆಗಳು ಸುಲಭವಾಗಿ ಲಭ್ಯವಾಗಲಿದ್ದು, ಪಶುಸಂಗೋಪನೆಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ.
ಜನಸಾಮಾನ್ಯರ ಅಗತ್ಯಗಳನ್ನು ಅರಿತು ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳ ಮೂಲಕ ಯಮಕನಮರಡಿ ಕ್ಷೇತ್ರವು ಮುಂದಿನ ದಿನಗಳಲ್ಲಿ ಇನ್ನೂ ಸಮಗ್ರ ಪ್ರಗತಿಯತ್ತ ಸಾಗಲಿದೆ ಎಂದು ರಾಹುಲ್ ಜಾರಕಿಹೊಳಿ ಹೇಳಿದರು.
ಕೆಪಿಸಿಸಿ ಸದಸ್ಯರಾದ ಮಲಗೌಡ ಪಾಟೀಲ್ ಅವರು ಕಡೋಲಿ ಗ್ರಾಮದಲ್ಲಿ ಕಳೆದ 17 ವರ್ಷಗಳಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ರೈತರು ಮತ್ತು ಜನರ ಹಿತದಲ್ಲಿ ಹಲವಾರು ಕಾಮಗಾರಿಗಳನ್ನು ಕೈಗೊಂಡಿದ್ದಾರೆ ಎಂದರು.

Spread the love

About Laxminews 24x7

Check Also

ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- ಗೋವಿಂದ ಕಾರಜೋಳ…!

Spread the love ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ