ಮುಖ್ಯಮಂತ್ರಿ Siddaramaiah ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಆಯೋಜಿಸಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಸಮುದಾಯದ ಸಾಮಾಜಿಕ ಸೇವೆಯನ್ನು ಸ್ಮರಿಸಿದರು.
ಶ್ರೀ ಕ್ಷೇತ್ರ ಮಾಣೀಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಬಿಜಾಪುರ ತೆಲಸಂಗದ ಶ್ರೀ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಹಾಗೂ ಚಿತ್ರದುರ್ಗ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನದ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಧರ್ಮವೀರ್ ಪ್ರಜಾಪತಿ
, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ನಾಯಕರುಗಳು ಹಾಗೂ ಕುಂಬಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ|| ಶ್ರೀನಿವಾಸನ್ ವೇಲು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Laxmi News 24×7