Breaking News

ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲೋದು ನಮ್ಮ ಗುರಿ : ಬಿಎಸ್ವೈ

Spread the love

ಶಿವಮೊಗ್ಗ, ಜ.3- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಪಡೆಯುವುದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿನ ಬಿಜೆಪಿ ಅಭೂತಪೂರ್ವ ಯಶಸ್ಸು ಸದ್ಯದಲ್ಲೇ ನಡೆಯುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಮುಂದುವರಿಯಬೇಕೆಂದು ಹೇಳಿದರು. ನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಫಲಿತಾಂಶ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉಲ್ಲಾಸ, ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದರು.

ಹಠ, ಛಲ ಮತ್ತು ಗುರಿ ಇದ್ದು ಗುರಿ ಮುಟ್ಟುವ ದಾರಿ ಗೊತ್ತಿರಬೇಕು. ಆಗ ಮಾತ್ರವೇ ನಿರೀಕ್ಷಿತ ಯಶಸ್ಸು ಗಳಿಸಲು ಸಾಧ್ಯ ಎಂದವರು ಹೇಳಿದರು. ಇನ್ನೆರಡು ವರ್ಷಗಳ ನಂತರ ಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನವನ್ನು ಪಡೆಯಬೇಕು. ಅದಕ್ಕಾಗಿ ಈಗಿನಿಂದಲೇ ನಮ್ಮೆಲ್ಲಾ ಪದಾಕಾರಿಗಳು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತ ರಾಗಬೇಕೆಂದು ಕರೆ ನೀಡಿದರು.

ಜನಸಂಘ ಕಾಲದ ನಮ್ಮ ಹಿರಿಯರ ಅಪೇಕ್ಷೆಯಂತೆ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಿ ಅನ್ನದಾತ ರೈತರನ್ನು ಸ್ವಾವಲಂಬಿಯನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ನುಡಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತನಾಡಿ, ಗ್ರಾಪಂ ಚುನಾವಣೆ ಬಳಿಕ ಬಿಜೆಪಿ ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಆಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮೂಲಕ ಯಡಿಯೂರಪ್ಪ ನುಡಿದಂತೆ ನಡೆವವರು ನಾವು ಎಂಬುದನ್ನು ಸಾಬೀತು ಪಡಿಸಿಲ್ಲಾರೆ ಎಂದರು.

ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಸಿಎಂ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಧ್ವಜಾರೋಹಣ ಮಾಡಿದ ಬಳಿಕ ಗೋಪೂಜೆ ನೆರವೇರಿಸಿದರು. ಇದಾದ ಬಳಿಕ ನಗರದ ಅನೇಕ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ