Breaking News

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Spread the love

ಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ, ದೇವರಾಜ ಅರಸು ಹಾಗೂ ನಾನು ಮೈಸೂರಿನವರೇ. ಇಬ್ಬರೂ ದೀರ್ಘಾವಧಿ ಮುಖ್ಯಮಂತ್ರಿಗಳಾಗಿದ್ದು, ಕಾಲಘಟ್ಟ ಬೇರೆ ಬೇರೆ. ದೇವರಾಜ ಅರಸು ಅವರು 1972 ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡನೇ ಅವಧಿಗೆ ಸಿಎಂ ಆಗಿದ್ದೇನೆ ಎಂದರು.ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ. ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ ಎಂದರು. ಇದೇ ವೇಳೆ ಸಂಪುಟ ಪುನಾರಚನೆ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ