Breaking News

ಆರಂಭವಾದ ದಿನವೇ ಬಂದ್ ಆದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ

Spread the love

ಆರಂಭವಾದ ದಿನವೇ ಬಂದ್ ಆದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ

ಹಾವೇರಿ : ನಗರದಲ್ಲಿರುವ ಸಾವಿರಾರು ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಗೆ ಡಿಸೆಂಬರ್ 20 ರಂದು ನಗರದ ಗುತ್ತಲ ರಸ್ತೆಯಲ್ಲಿ ಎಪಿಎಂಸಿ ಯಾರ್ಡ್‌ನಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರವನ್ನು ಆರಂಭಿಸಲಾಗಿತ್ತು. ಹಾವೇರಿ ನಗರಸಭೆ ಮತ್ತು ಪಶುಸಂಗೋಪನೆ ಇಲಾಖೆಯ ಸಹಭಾಗಿತ್ವದಲ್ಲಿ ಈ ಕೇಂದ್ರ ಆರಂಭ ಮಾಡಲಾಗಿತ್ತು. ಆದರೆ, ಕೇಂದ್ರ ಆರಂಭವಾದ ದಿನವೇ ಬಂದಾಗಿದೆ.

ನಗರದ 25 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿದ ವೈದ್ಯರ ತಂಡ ಶಸ್ತ್ರಚಿಕಿತ್ಸೆಯನ್ನ ಬಂದ್ ಮಾಡಿದೆ. ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ ಆರಂಭ ಮಾಡಿ 15 ದಿನ ಕಳೆದಿದ್ದರೂ ಕೇಂದ್ರ ಮರು ಆರಂಭವಾಗಿಲ್ಲ. ನಗರದ ಜನ ಮಾತ್ರ ದಿನನಿತ್ಯ ಬೀದಿನಾಯಿ ಹಾವಳಿಯಲ್ಲಿ ಜೀವನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕು ಕೇಂದ್ರಗಳಲ್ಲಿ 50, ಜಿಲ್ಲಾಕೇಂದ್ರದಲ್ಲಿ 25 : ಹಾವೇರಿ ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿಯಿಂದ ಕಂಗೆಟ್ಟಿದ್ದ ಜಿಲ್ಲಾಡಳಿತ ಸುಪ್ರೀಂಕೋರ್ಟ್ ಆದೇಶದಂತೆ ಸಂತಾನಹರಣ ಚಿಕಿತ್ಸೆಗೆ ಮುಂದಾಗಿತ್ತು. ಜಿಲ್ಲೆಯಲ್ಲಿ ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ವಿಭಾಗದಲ್ಲಿ 10 ಬೀದಿ ನಾಯಿಗಳ ಸಂತಾನಹರಣದ ಶಸ್ತ್ರಚಿಕಿತ್ಸಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ