ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಮಟ್ಟದ ಹೆರಿಗೆ
ಗೋಕಾಕ ನಗರದಸರಕಾರಿ ಆಸ್ಪತ್ರೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಅಂದರೆ 30 ದಿನಗಳಲ್ಲಿ ಸುಮಾರು 640 ಕೂ ಹೆರಿಗೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ತಾಲೂಕು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಗರ್ಭಿಣಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸುತ್ತಿದ್ದು, ಸರಕಾರಿ ಆಸ್ಪತ್ರೆಯ ವೈದ್ಯರು ಮತ್ತು
ಸಿಬ್ಬಂದಿಯ ಶ್ರಮದಿಂದ ಸುರಕ್ಷಿತ ಹೆರಿಗೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ತಾಯಿ ಮತ್ತು ಶಿಶು ಆರೋಗ್ಯಕ್ಕೆ ಆದ್ಯತೆ ನೀಡುತ್ತಿರುವ ಆಸ್ಪತ್ರೆ ಆಡಳಿತದ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Laxmi News 24×7