Breaking News
Home / Uncategorized / ಮಗನೊಬ್ಬ ತನ್ನ ತಾಯಿಯ ನೆನಪಿಗಾಗಿ ಸ್ವಂತ ಖರ್ಚಿನಲ್ಲಿ ಇಡೀ ಪಟ್ಟಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿದ್ದಾನೆ.

ಮಗನೊಬ್ಬ ತನ್ನ ತಾಯಿಯ ನೆನಪಿಗಾಗಿ ಸ್ವಂತ ಖರ್ಚಿನಲ್ಲಿ ಇಡೀ ಪಟ್ಟಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿದ್ದಾನೆ.

Spread the love

ಯಾದಗಿರಿ: ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿಯ ನೆನಪಿಗಾಗಿ ಸ್ವಂತ ಖರ್ಚಿನಲ್ಲಿ ಇಡೀ ಪಟ್ಟಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿದ್ದಾನೆ.

ಜಿಲ್ಲೆ ಈಗ ಕೊರೊನಾ ಹಾಟಸ್ಪಾಟ್ ಆಗಿದೆ. ಬರೋಬ್ಬರಿ ನಾಲ್ಕು ದಿನಗಳಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಇದರಿಂದಾಗಿ ಜಿಲ್ಲೆಯ ಜನ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಈ ವೇಳೆ ಜಿಲ್ಲೆಯ ಶಹಪುರದ ವ್ಯಕ್ತಿಯೊಬ್ಬ ಕೊರೊನಾ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ.

 

ಪಟ್ಟಣದ ಗುರು ಮಣಿಕಂಠ ಸ್ವಯಂ ಪ್ರೇರಿತವಾಗಿ ತನ್ನ ಸ್ವಂತ ಖರ್ಚಿನಲ್ಲಿ ಶಹಪುರ ಸಂಪೂರ್ಣ ನಗರಕ್ಕೆ ಸ್ಯಾನಿಟೈಸ್ ಮಾಡಿಸುವ ಮೂಲಕ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಮಣಿಕಂಥ ತಮ್ಮ ಅಮ್ಮನ 36 ಪುಣ್ಯಸ್ಮರಣೆ ಅಂಗವಾಗಿ ಸುಮಾರು ಒಂದು ಲಕ್ಷ ಹಣ ವೆಚ್ಚ ಮಾಡಿ ಸಂಪೂರ್ಣ ಶಹಾಪುರ ನಗರಕ್ಕೆ ಎರಡು ಟ್ರಾಕ್ಟರ್‍ಗಳ ಮೂಲಕ ಸಾನಿಟೈಸರ್ ಮಾಡಿಸಿದ್ದಾರೆ.

ಅಲ್ಲದೇ ಶಹಾಪುರದಲ್ಲಿ ತಮ್ಮ ತಾಯಿಯ ನೆನಪಿನಲ್ಲಿ ಬಡ ವರ್ಗದ ಜನರಿಗೆ 10 ರೂಪಾಯಿಗೆ ಹೊಟ್ಟೆ ತುಂಬ ಊಟ ನೀಡುವ ನಿಟ್ಟಿನಲ್ಲಿ ‘ಅಮ್ಮ ಕ್ಯಾಂಟಿನ್’ ಸಹ ಆರಂಭಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಮ್ಮನ ನೆನಪಿಗಾಗಿ ಜಿಲ್ಲೆಯಲ್ಲಿ ಮೊಟ್ಟ ಮೊದಲಿಗೆ ‘ಅಮ್ಮ ಕ್ಯಾಂಟಿನ್’ ತೆಗೆದು ಬಡವರ ಹಸಿವು ನೀಗಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಇದೀಗ ಜಿಲ್ಲೆಯಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈಯಕ್ತಿಕವಾಗಿ ಖರ್ಚು ಮಾಡಿ ಔಷಧಿ ಸಿಂಪಡಣೆ ಮಾಡಿಸಿದ್ದಾರೆ. ಯಾವುದೇ ಲಾಭ ಪಡೆಯದೆ ತಮ್ಮ ಅಮ್ಮನ ನೆನಪಿನಲ್ಲಿ ಗುರು ಮಣಿಕಂಠ ಅವರು ಸಾಮಾಜಿಕ ಕಾಳಜಿ ತೋರುತ್ತಿರುವುಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.


Spread the love

About Laxminews 24x7

Check Also

ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Spread the loveಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ