Breaking News

ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ: ಡಿಕೆಶಿಗೆ ಕೇಂದ್ರ ಸಚಿವ ಹೆಚ್​ಡಿಕೆ ತಿರುಗೇಟು

Spread the love

ಬೆಂಗಳೂರು: ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ ಎಂದು ಡಿಸಿಎಂ ಡಿಕೆಶಿ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ!. ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು ಎಂದು ಟೀಕಿಸಿದ್ದಾರೆ.

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ. ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ