Breaking News

ಇನಾಮದಾರ ಸಕ್ಕರೆ ಕಾರ್ಖಾನೆ ದುರಂತ: ಮೃತ ಕಾರ್ಮಿಕರ ಸಂಖ್ಯೆ 8ಕ್ಕೆ ಏರಿಕೆ; ಓರ್ವ ಕಾರ್ಮಿಕನ ಪತ್ನಿ ತುಂಬು ಗರ್ಭಿಣಿ

Spread the love

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ರಾಘವೇಂದ್ರ ಮಲ್ಲಪ್ಪ ಗಿರಿಯಾಳ್​ (36) ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಮೃತ ಕಾರ್ಮಿಕರ ಸಂಖ್ಯೆ 8ಕ್ಕೆ ಏರಿದೆ.

ಕಾರ್ಖಾನೆಯ ನಂಬರ್​​ 1ರ ಕಂಪಾರ್ಟ್‌ಮೆಂಟ್​ನಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ವಾಲ್ ರಿಪೇರಿ ಮಾಡುವಾಗ ಸ್ಫೋಟವಾಗಿತ್ತು. ಬಾಯ್ಲರ್​ನಲ್ಲಿದ್ದ ಬಿಸಿ ಮಳ್ಳಿ (ಪದಾರ್ಥ) ಕಾರ್ಮಿಕರ ಮೈಮೇಲೆ ಬಿದ್ದು 8 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.

ಕ್ಷಣ ಗಾಯಾಳುಗಳನ್ನು ಕೆಎಲ್ಇ ಆಸ್ಪತ್ರೆ ಮತ್ತು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ದೀಪಕ್​ ಮುನವಳ್ಳಿ (31), ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ (25), ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಅಕ್ಷಯ್ ಸುಭಾಷ ಚೋಪಡೆ (48) ಮೃತಪಟ್ಟವರು.

ಇದಾದ ಬಳಿಕ ಮತ್ತೆ ಗುರುವಾರ ಬೆಳಗ್ಗೆ ನಾಲ್ವರು ಸಾವನ್ನಪ್ಪಿದ್ದರು. ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27), ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜುನಾಥ ಮಡಿವಾಳಪ್ಪ ಕಾಜಗಾರ್ (28), ಬಾಗಲಕೋಟೆ ಮರೆಗುದ್ದಿ ಗ್ರಾಮದ ಗುರುನಾಥ ಭೀರಪ್ಪ ತಮ್ಮಣ್ಣವರ (38), ಅಥಣಿ ತಾಲೂಕಿನ ಹೂಲಿಕಟ್ಟಿ ಮಂಜುನಾಥ ಗೋಪಾಲ ತೇರದಾಳ (31) ಅವರೂ ಕೂಡ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇನ್ನು ಶುಕ್ರವಾರ ಬೆಳಗ್ಗೆ ಗೋಕಾಕ ತಾಲೂಕಿನ ಗಿಳಿಹೊಸೂರ ಗ್ರಾಮದ ರಾಘವೇಂದ್ರ ಮಲ್ಲಪ್ಪ ಗಿರಿಯಾಳ್​ (36) ಕೂಡ ಸಾವನ್ನಪ್ಪಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ