Breaking News

ಪತ್ನಿಯನ್ನು ಹೊತ್ತು ಅಂಜನಾದ್ರಿಯ 575 ಮೆಟ್ಟಿಲು ಏರಿದ ಭೂಪ

Spread the love

ಗಂಗಾವತಿ(ಕೊಪ್ಪಳ): ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರಾಕೃತಿಕ ತಾಣವಾಗಿರುವ ಚಿಕ್ಕರಾಂಪೂರದ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯದ ನಾನಾ ಭಾಗದಿಂದ ನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಒಬ್ಬೊಬ್ಬರು ಒಂದೊಂದು ಹರಕೆ ಹೊತ್ತು ಬರುವುದು ಸರ್ವೇ ಸಾಮಾನ್ಯ. ಭಾರವಾದ ಮೂಟೆ ಹೊತ್ತು ಅಂಜನಾದ್ರಿ ಬೆಟ್ಟ ಏರಿ ಹರಕೆ ತೀರಿಸಿರುವ ಭಕ್ತರ ಬಗ್ಗೆ ಕೇಳಿರುತ್ತೀರಿ, ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಪತ್ನಿಯನ್ನೇ ಎತ್ತಿಕೊಂಡು 575 ಮೆಟ್ಟಿಲು ಹತ್ತಿ ಗಮನ ಸೆಳೆದಿದ್ದಾನೆ.HUSBAND CARRIES WIFE TO ANJANADRI

ಯಲಬುರ್ಗಾ ಮೂಲದ ಶರಣು ಮೇಟಿ ತನ್ನ ಪತ್ನಿ ಮಂಜುಳಾರನ್ನು ಎತ್ತಿಕೊಂಡು ಅಂಜನಾದ್ರಿ ಬೆಟ್ಟ ಏರಿದವರು. ಕಡಿದಾದ ರಸ್ತೆ ಮತ್ತು ಮೆಟ್ಟಿಲು ಮಾರ್ಗ ಹೊಂದಿರುವ ತಾಲೂಕಿನ ಅಂಜನಾದ್ರಿಯ ಹನುಮಪ್ಪನ ಬೆಟ್ಟ ಹತ್ತುವುದು ಎಂದರೆ ಸಾಮಾನ್ಯ ಜನರಿಗೆ ಪ್ರಯಾಸವಾಗುತ್ತದೆ. ಅಂಥಹದ್ದರಲ್ಲಿ ಶರಣು ಮೇಟಿ ಪತ್ನಿ ಎತ್ತಿಕೊಂಡು, ಮಾರ್ಗಮಧ್ಯೆ ಎಲ್ಲಿಯೂ ವಿಶ್ರಾಂತಿ ಪಡೆಯದೇ ಬೆಟ್ಟ ಹತ್ತಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಯಾವ ಕಾರಣಕ್ಕೆ ಪತ್ನಿಯನ್ನು ಹೊತ್ತು ಬೆಟ್ಟ ಏರಿದೆ ಎಂಬ ಬಗ್ಗೆ ಶರಣು ಮೇಟಿ ತಿಳಿಸಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ