Breaking News

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the love

ಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ, ನರ್ಮ್ ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರ ಕುಂದು – ಕೊರತೆ ಆಲಿಸಿದರು.

ಸಾತಗಳ್ಳಿ ಅಂಬೇಡ್ಕರ್ ಕಾಲೋನಿಯಲ್ಲಿ 560 ಗುಂಪು ಮನೆಗಳಿದ್ದು, ಕಳೆದ 15 ವರ್ಷಗಳಿಂದ ವಾಸವಾಗಿದ್ದೇವೆ. ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಹಾಗೂ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಇಲ್ಲಿನ ಅಂಬೇಡ್ಕರ್ ಸಮುದಾಯ ಭವನದಲ್ಲೇ ಸೂಕ್ತ ಸೌಲಭ್ಯಗಳು ಇಲ್ಲದೇ ಅಂಗನವಾಡಿ, ಸ್ಕೂಲ್ ನಡೆಸಲಾಗುತ್ತಿದೆ.ಅಹವಾಲು ಹೇಳಿಕೊಂಡ ನಿವಾಸಿಗಳು: ಚಿಂತಾಜನಕ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದೇವೆ. ಇರುವುದು ಒಂದೇ ಬೋರ್ ವೆಲ್. ಅಷ್ಟೂ ಮನೆಗಳಿಗೂ ಒಂದೇ ಬೋರ್​ವೆಲ್​ನಲ್ಲಿ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಕಳೆದ ಹದಿನೈದು ವರ್ಷದಿಂದಲೂ ಹೀನಾಯವಾಗಿ ಬದುಕು ನಡೆಸುತ್ತಿದ್ದೇವೆ. ಮನೆಗಳ ಸುತ್ತಲೂ ಕಸ ತುಂಬಿರುತ್ತದೆ. ಸ್ವಚ್ಛತೆ ಇಲ್ಲ. ಎಷ್ಟೇ ಮನವಿ ಮಾಡಿದರೂ ಯಾರೋಬ್ಬ ಅಧಿಕಾರಿಗಳು ಬರುವುದಿಲ್ಲ. ಪುಂಡರ ಹಾವಳಿ, ರಸ್ತೆ ಅಭಿವೃದ್ಧಿಯಾಗಿಲ್ಲ. ಕಟ್ಟಡಗಳ ಛಾವಣಿ ಹಾಳಾಗಿದೆ. ಗಾಂಜ-ಡ್ರಗ್ಸ್ ಸೇವನೆ ಮಾಡುವವರು ಸ್ಥಳಿಯರ ಮೇಲೆ ಹಲ್ಲೆ ನಡೆಸುತ್ತಾರೆ. ಸಂಜೆ ವೇಳೆ ತಿರುಗಾಡುವುದ ಕಷ್ಟವಾಗಿದೆ ಎಂದು ನಿವಾಸಿಗಳು ಅಹವಾಲು ಸಲ್ಲಿಸಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ