Breaking News

ಬಂಡವಾಳ ಆಕರ್ಷಣೆ, ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ ಕೆ ಶಿವಕುಮಾರ್

Spread the love

ಮಂಗಳೂರು: ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲ ವಿಶೇಷತೆ ಇರುವ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಹಿಂದುಳಿದಿರುವುದು ಯಾಕೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ ಎಂದು ತಿಳಿಸಿದರು.

ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ತಿಳಿಸಿದೆ ಎಂದರು.

ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡುತ್ತಿದ್ದೇನೆ ಎಂದರು.


Spread the love

About Laxminews 24x7

Check Also

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಸಿಸಿಎಸ್ಆರ್ ನೀತಿ ರೂಪಿಸಿಕೊಂಡ ಸರ್ಕಾರ: ಪ್ರಸ್ತಾಪಿತ ನೀತಿ ಹೀಗಿದೆ

Spread the loveಬೆಂಗಳೂರು: ರಾಜ್ಯ ಸರ್ಕಾರ ಇದೀಗ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವಕ್ಕೆ ಹೆಚ್ಚಿನ‌ ಒತ್ತು ನೀಡುತ್ತಿದೆ.‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ