ರಾಹುಲ್ ಜಾರಕಿಹೊಳಿ DCC ಬ್ಯಾಂಕ್ ನಿರ್ದೇಶಕರು ಹಾಗೂ ಯುವ್ತ ಕಾಂಗ್ರೆಸ್ ರಾಜ್ಯ ಪ್ರದಾನ ಕಾರ್ಯದರ್ಶಿಗಳು
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿಯಾಗಿ ಆಯ್ಕೆಯನ್ನು ಬಯಸಿ, ಇಂದು ಬೆಂಗಳೂರಿನ ಅಪೆಕ್ಸ್ ಬ್ಯಾಂಕ್
ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರವನ್ನು ಸಲ್ಲಿಸಿದೆ. ಈ ಸಂದರ್ಭದಲ್ಲಿ ಹಿರಿಯರು ಹಾಗೂ ಮಾಜಿ ಸಚಿವರಾದ ಶ್ರೀ ಕೆ.ಎನ್. ರಾಜಣ್ಣ, ಶ್ರೀ ವೀರಕುಮಾರ್ ಪಾಟೀಲ ಹಾಗೂ ಬುಡಾ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ ಅವರು ಉಪಸ್ಥಿತರಿದ್ದರು.
ಸಹಕಾರ ಕ್ಷೇತ್ರದ ಬಲವರ್ಧನೆ, ರೈತರು ಹಾಗೂ ಗ್ರಾಮೀಣಾಭಿವೃದ್ಧಿಗೆ ಇನ್ನಷ್ಟು ಶಕ್ತಿ ತುಂಬುವ ದೃಢ ಉದ್ದೇಶದೊಂದಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಸಂಕಲ್ಪ ಹೊಂದಿದ್ದೇನೆ. ಈ ಪ್ರಯತ್ನದಲ್ಲಿ ಎಲ್ಲರ ಸಹಕಾರ ಮತ್ತು ಆಶೀರ್ವಾದ ಸದಾ ಇರಲಿ ಎಂದು ಹೃತ್ಪೂರ್ವಕವಾಗಿ ಕೋರುತ್ತೇನೆ.
Laxmi News 24×7