Breaking News

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the love

ಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ ಜನರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ರೈತರು ಮತ್ತು ಬಡವರ ಹಕ್ಕುಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಸೋಮವಾರ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಖರ್ಗೆ, ಸೋಮನಾಥ ದೇವಾಲಯದ ಮೇಲೆ ಪ್ರಧಾನಿ ಮೋದಿ ಇತ್ತೀಚೆಗೆ ಗಮನಹರಿಸುತ್ತಿದ್ದಾರೆ. ಇದು ಮುಂಬರುವ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಚುನಾವಣೆಗಳಲ್ಲಿ ಮತಗಳನ್ನು ಗಳಿಸುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರ ರೈತರು ಮತ್ತು ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಮತ್ತು MGNREGAದ ಹೆಸರು ಬದಲಾವಣೆ ಹಾಗೂ ಮಾರ್ಪಾಡುಗಳ ವಿರುದ್ಧ ಪ್ರತಿಭಟಿಸಲು ಜನರು ಸಿದ್ಧರಾಗಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಸ್ಥಳೀಯ ಅಭಿವೃದ್ಧಿ ಯೋಜನೆಗಳನ್ನು ಸಿದ್ಧಪಡಿಸುವ ಗ್ರಾಮ ಪಂಚಾಯಿತಿಗಳ ಹಕ್ಕನ್ನು ಮೋದಿ ಕಸಿದುಕೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿ ಒಂದು ದಿನ ತಮ್ಮ ಕ್ರಮಗಳಿಗೆ ವಿಷಾದಿಸುತ್ತಾರೆ. ಜನರು ಒಗ್ಗೂಡಿ ಮೋದಿಗೆ ಪಾಠ ಕಲಿಸದಿದ್ದರೆ, ಅವರು ದೇಶದ ಕಾನೂನುಗಳು ಮತ್ತು ಸಂವಿಧಾನವನ್ನು ನಾಶಪಡಿಸುತ್ತಾರೆ. ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತಗಳನ್ನು ಗೆಲ್ಲಲು ಮೋದಿ ಈಗ ಸೋಮನಾಥ ದೇವಾಲಯದ ನೆನಪಾಗಿದೆ ಎಂದು ಇದೇ ವೇಳೆ ಖರ್ಗೆ ಲೇವಡಿ ಮಾಡಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ