Breaking News

ಬಸವನ ಬಾಗೇವಾಡಿಯಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ*

Spread the love

ಬಸವನ ಬಾಗೇವಾಡಿಯಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ*
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಹಾಗೂ ಸಿಪಿಐ ಗುರು ಶಾಂತಗೌಡ ದಾಶ್ಯಾಳ ಅವರ ನೇತೃತ್ವದಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ 2026 ಕಾರ್ಯಕ್ರಮ ನಡೆಯಿತು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿದ್ದಲಿಂಗ ಮಹಾ ಸ್ವಾಮೀಜಿಯವರು ಮತ್ತು ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಅವರು ಸೇರಿಕೊಂಡು ರಸ್ತೆ ಸುರಕ್ಷಾ ಜಾಥಾ ಬೈಕ್ ರ್ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬೈಕ್ ರ್ಯಾಲಿಯನ್ನು ಪಟ್ಟಣದ ಹಲವಾರು ಬೀದಿಗಳಲ್ಲಿ ಸಂಚರಿಸಿ ಹೆಲ್ಮೆಟ್ ಹಾಕಿಕೊಂಡು ವಾಹನವನ್ನು ಚಲಾಯಿಸಬೇಕೆಂದು ಜನರಿಗೆ ಜಾಗೃತಿ ಮೂಡಿಸಿದರು.
ಡಿವೈಸ್ಪಿ ಬಲ್ಲಪ್ಪ ನಂದಗಾವಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಬೈಕ ಚಾ ಲಕರು ಕಡ್ಡಾಯವಾಗಿ ಹೆಲ್ಮೆಟ್ ಲೈಸನ್ಸ್ ಮತ್ತು ತ್ರಿಬಲ್ ರೆಡ್ ಅತಿ ವೇಗವಾಗಿ ವಾಹನ ಚಾಲನೆ ಮಾಡಬಾರದು ಎಂದರು. ಇದೇ ಸಮಯದಲ್ಲಿ ಜಾಗೃತಿ ಜಾಥಾದಲ್ಲಿ ಹಲವಾರು ಪೊಲೀಸ್ ಸಿಬ್ಬಂದಿಗಳು ಹಲವಾರು ಜನರು ಹೆಲ್ಮೆಟ್ ಧರಿಸಿಕೊಂಡು ಭಾಗವಹಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ