Breaking News

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

Spread the love

ಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ ಮಾಡದಿದ್ದರೆ, ಸಿಎಂಗೆ 85% ಕಮಿಷನ್ ಹೋಗುತ್ತಿದೆ ಅಂತರ್ಥ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಜೊತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಅಬಕಾರಿ ಇಲಾಖೆಗೆ ವರ್ಷದಿಂದ ವರ್ಷಕ್ಕೆ ಕಲೆಕ್ಷನ್ ಟಾರ್ಗೆಟ್ ಕೊಡುತ್ತಿದ್ದರು. ಅದರ ಪರಿಣಾಮ ಸನ್ನದುಗಳು ಅಬಕಾರಿ ಇಲಾಖೆಯಲ್ಲಿ ಹರಾಜು ಆಗುತ್ತಿದೆ. ನಿನ್ನೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡ ತಿಮಿಂಗಿಲ ಬಂಧಿಸಿದ್ದಾರೆ. ಒಂದೇ ಒಂದು ಸನ್ನದಿಗೆ 2.30 ಕೋಟಿ ರೂ. ಕೇಳಿ ರೆಡ್ ‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಬಕಾರಿ ಇಲಾಖೆಯು ಆರ್ಥಿಕ ಇಲಾಖೆಯಡಿ ಬರುತ್ತದೆ. ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಿದ್ದರಾಮಯ್ಯ ನೇರ ಕಾರಣ ಎಂದು ಆರೋಪಿಸಿದರು.

”ನಕಲಿ ಗಾಂಧಿಗಳು ಇವರು, ಗಾಂಧಿ ಹೆಸರು ಹೇಳಲು ನೈತಿಕತೆ ಇಲ್ಲ. ಗಾಂಧಿಯವರ ಬಗ್ಗೆ ಮಾತಾಡ್ತಾರೆ? ಎಲ್ಲಿದೆ ಆದರ್ಶ? ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡುತ್ತಿದ್ದಾರೆ. ಇನ್ನೊಂದು ಕಡೆ ಬೆಂಗಳೂರನ್ನು ನಶೆಯಲ್ಲಿ ಮುಳುಗಿಸಿದ್ದಾರೆ. ಕಳ್ಳ ಕಾಂಗ್ರೆಸಿಗರು ಒಂದು ಕಡೆ ಕುಡಿಸೋದು, ಇನ್ನೊಂದು ಕಡೆ ವಸೂಲಿ. ಅಬಕಾರಿ ಮಂತ್ರಿ ತಿಮ್ಮಾಪುರ ಒಂದು ಕ್ಷಣವೂ‌ ಅಧಿಕಾರದಲ್ಲಿ ಇರಬಾರದು, ರಾಜೀನಾಮೆ ಕೊಡಬೇಕು. ಇಲ್ಲವೆಂದರೆ ಮಂತ್ರಿಗಳನ್ನು ಸಂಪುಟದಿಂದ ಸಿಎಂ ತೆಗೆಯಲಿ” ಎಂದು ಒತ್ತಾಯಿಸಿದರು.

”ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಎ1 ಖದೀಮ, ಸೂಪರಿಂಟೆಂಡೆಂಟ್ ತಮ್ಮಣ್ಣ ಮಿನಿ ಖದೀಮ, ಲಕ್ಕಪ್ಪ ಗಣಿ ಹೆಸರಲ್ಲೇ ಗಣಿ ಇದೆ. ಮೂವರೂ ಲೋಕಾ ಬಲೆಗೆ ಬಿದ್ದಿದ್ದಾರೆ. ಸಿಎಲ್-7 ಒಟ್ಟು 750 ಲೈಸೆನ್ಸ್ ಕೊಡುತ್ತಿದ್ದಾರೆ. ಪ್ರತಿ ಸಿಎಲ್‌-7ಗೆ 1.5 ಕೋಟಿ ರೂ. ಲಂಚ, 650 ಸಿಎಲ್-2 ಸನ್ನದುಗಳು 1.5 ಕೋಟಿ ರೂ.ಗೆ ಹರಾಜು, ಒಟ್ಟು 950 ಕೋಟಿ ಲಂಚ, 1 ಕೋಟಿಗೆ ಸಿಎಲ್-9 ಕೊಡುತ್ತಿದ್ದಾರೆ, ಒಟ್ಟು 92 ಕೋಟಿ, ಮೈಕ್ರೋಬ್ರೆವರಿಗಳಿಗೆ ಅತೀ ಹೆಚ್ಚು ಲಂಚ ಕೊಡಬೇಕು. 1 ಮೈಕ್ರೋಬ್ರೆವರಿಗೆ 2.5 ಕೋಟಿ ರೂ., ಅಂತಹ 550 ಮೈಕ್ರೋಬ್ರೆವರಿಗಳಿವೆ” ಎಂದರು.‌


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ