Breaking News

ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ

Spread the love

ಹೈದರಾಬಾದ್‌: ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ನವದೆಹಲಿಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಭಾನುವಾರ ರಾತ್ರಿ 9 ಗಂಟೆಗೆ ಸುಮಾರಿಗೆ ತೆಲಂಗಾಣದ ವಿಕರಾಬಾದ್‌ ಜಿಲ್ಲೆ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕೊ ಪೈಲೆಟ್‌ ರೈಲು ಎಂಜಿನಲ್ಲಿ ಬೆಂಕಿ ಉರಿಯುವುದನ್ನು ಗಮನಿಸಿದ ತಕ್ಷಣವೇ ರೈಲನ್ನು ನಿಲ್ಲಿಸಿದ್ದಾರೆ. ಕೂಡಲೇ ಬೋಗಿಗಳಿಂದ ಎಂಜಿನ್‌ನನನ್ನು ಬೇರ್ಪಡಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ