Breaking News

ಲಾಕ್‍ಡೌನ್ ಟೈಮಲ್ಲಿ ಎಣ್ಣೆ ವಿಚಾರಕ್ಕೆ ಬಿತ್ತು ಸ್ನೇಹಿತನ ಹೆಣ..!

Spread the love

ಬೆಂಗಳೂರು,ಜು.15-ಲಾಕ್‍ಡೌನ್ ಸಂದರ್ಭದಲ್ಲಿ ಮದ್ಯ ತರುವ ವಿಚಾರದಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರಿಂದಲೇ ಕೊಲೆಯಾದವನನ್ನು ಪಂತರಪಾಳ್ಯ ಅಂಬೇಡ್ಕರ್ ಸ್ಲಂ ನಿವಾಸಿ ಶಶಿ(22) ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ 8 ಗಂಟೆಗೆ ಲಾಕ್‍ಡೌನ್ ಜಾರಿಯಾದ ಸಂದರ್ಭದಲ್ಲಿ ಶಶಿ ಮತ್ತು ಸ್ನೇಹಿತರಾದ ವಿನೋದ್ ಹಾಗೂ ವೇಲು ಅವರುಗಳು ಮದ್ಯ ತರುವ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದರು.ಗಲಾಟೆ ಸಂದರ್ಭದಲ್ಲಿ ಶಶಿ, ವಿನೋದ್ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಕುಪಿತಗೊಂಡ ವಿನೋದ್, ವೇಲು ಅವರು ತಮ್ಮ ಇತರ ಸಹಚರರನ್ನು ಕರೆಸಿಕೊಂಡು ಶಶಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಶಶಿಯನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೆÇಲೀಸರು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ