Breaking News

ರಾಜ್ಯಪಾಲರ ಭಾಷಣದ ಮೊದಲ 11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ಟೀಕಿಸಿ ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ

Spread the love

ಬೆಂಗಳೂರು : ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು‌ ಮಂಡಿಸಿ, ಅದರಲ್ಲಿನ ಅಂಶವನ್ನು ಓದದೇ ತಾವೇ ಬರೆದು ತಂದ ಪ್ಯಾರಾವನ್ನು ಓದಿ ಸದನದಿಂದ ತೆರಳಿದರು. ಬಳಿಕ ಪುನಾರಂಭಗೊಂಡ ಕಲಾಪದಲ್ಲಿ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣವನ್ನು ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಮಂಡನೆ ಮಾಡಿದರು.M. K. Vishalakshi

ಭಾಷಣದ 11 ಪ್ಯಾರಾ ವಿಬಿ ಜಿ ರಾಮ್ ಜಿ ವಿರುದ್ಧ ಪ್ರಸ್ತಾಪ : ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣದಲ್ಲಿ ಮೊದಲ 11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ವಿರೋಧಿಸಿ, ಕೇಂದ್ರ ಸರ್ಕಾರದ ನೀತಿ ಟೀಕಿಸಿರುವ ಅಂಶಗಳನ್ನು ಸೇರಿಸಲಾಗಿದೆ. ನನ್ನ ಸರ್ಕಾರವು ಅಭಿವೃದ್ಧಿ, ಸಾಮಾಜಿಕ ನ್ಯಾಯ, ಹಣಕಾಸಿನ ಶಿಸ್ತು, ಪ್ರಾದೇಶಿಕ ನ್ಯಾಯ, ಜನಸ್ನೇಹಿ ಆಡಳಿತ, ಕಾನೂನು ಸುವ್ಯವಸ್ಥೆ ಮುಂತಾದವುಗಳಲ್ಲಿ ಅಭೂತಪೂರ್ವ ಸಾಧನೆಗಳನ್ನು ಮಾಡುತ್ತಿದೆ.

ಪರಿಣಾಮಕಾರಿ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿರುವ ರಾಜ್ಯಗಳಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ ಹಾಗೂ ಇಂಡಿಯಾ ಜಸ್ಟೀಸ್‌ -2025ರ ವರದಿ ಪ್ರಕಾರ, ಪೊಲೀಸ್‌ ಮತ್ತು ನ್ಯಾಯದಾನ ವ್ಯವಸ್ಥೆ ರೂಪಿಸಿರುವ ದೇಶದ ಮಧ್ಯಮ ಮತ್ತು ದೊಡ್ಡ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ.

ಸಾಮಾಜಿಕ ಆರ್ಥಿಕ ಅಭಿವೃದ್ಧಿ, ಜನಸ್ನೇಹಿ ಕಾನೂನುಗಳ ರಚನೆ, ಕೈಗಾರಿಕಾ ಪರವಾದ ನೀತಿಗಳ ರಚನೆ ಮತ್ತು ಅನುಷ್ಠಾನ, ಸುಸಂಬದ್ಧವಾದ ಸಾರಿಗೆ ವ್ಯವಸ್ಥೆ, ಸರ್ಕಾರದ ಅಧೀನದ ಸಂಸ್ಥೆಗಳ ಕಾರ್ಯವೈಖರಿ, ಪೊಲೀಸ್, ನ್ಯಾಯ ವ್ಯವಸ್ಥೆ ಮುಂತಾದವುಗಳಲ್ಲಿ ಕರ್ನಾಟಕವು ಇಂದು ದೇಶದಲ್ಲಿ ಹಲವು ಮಾದರಿಗಳನ್ನು ಸೃಷ್ಟಿಸಿದೆ ಎಂದಿದೆ.

ರಾಜ್ಯವು ಒಕ್ಕೂಟ ವ್ಯವಸ್ಥೆಯಲ್ಲಿ ಆರ್ಥಿಕ ಮತ್ತು ನೀತಿಕಾರಕ ವಿಚಾರಗಳಲ್ಲಿ ದಮನಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗಳು, ಕೇಂದ್ರದ ಯೋಜನೆಗಳು, ವಿಶೇಷ ಯೋಜನೆಗಳು ಮುಂತಾದವುಗಳಲ್ಲಿ ಅನ್ಯಾಯಗಳಿಗೆ ತುತ್ತಾಗಿದೆ. ದೇಶದ ಆರ್ಥಿಕತೆಯಲ್ಲಿ ಚಾಲಕ ಸ್ಥಾನದಲ್ಲಿರುವ ಕರ್ನಾಟಕವನ್ನು ಆರ್ಥಿಕವಾಗಿ ದಮನಿಸಿದರೆ ಅದರ ಪರಿಣಾಮ ಇಡೀ ದೇಶದ ಮೇಲೆ ಉಂಟಾಗುತ್ತದೆ ಎಂಬುದನ್ನು ಒಕ್ಕೂಟ ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕಾಗಿದೆ.

15ನೇ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು 1.25 ಲಕ್ಷ ಕೋಟಿ ರೂ.ಗಳಷ್ಟು ಬೃಹತ್‌ ಪ್ರಮಾಣದ ಸಂಪನ್ಮೂಲಗಳು ರಾಜ್ಯಕ್ಕೆ ಸಿಗದೇ ವಂಚನೆಯಾಗಿದೆ ಎಂಬುದನ್ನು 16ನೇ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನ್ಯಾಯವು ಸರಿಯಾಗಬಹುದೆಂಬುದು ಸರ್ಕಾರದ ಖಚಿತ ನಂಬುಗೆಯಾಗಿದೆ ಎಂದು ವಿವರಿಸಿದೆ‌.

ಇಷ್ಟರ ನಡುವೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ” ಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಆ ಮೂಲಕ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು, ಸಣ್ಣ ರೈತರ, ಮಹಿಳೆಯರ ಉದ್ಯೋಗದ ಮತ್ತು ನಿರುದ್ಯೋಗ ಭತ್ಯೆಯ ಹಕ್ಕನ್ನು ಕಸಿದುಕೊಂಡಿದೆ. ಗ್ರಾಮೀಣ ಭಾರತದ ಅಭಿವೃದ್ಧಿ ಪರ್ವದ ಬೃಹತ್‌ ಅಧ್ಯಾಯವಾಗಿದ್ದ “ಮನರೇಗಾ” ಕಾಯ್ದೆಯ ರದ್ಧತಿಯ ಮೂಲಕ ಭಾರತೀಯ ಗ್ರಾಮೀಣ ಬದುಕನ್ನು ದುರ್ಬಲಗೊಳಿಸಲಾಗಿದೆ ಎಂದು ಆಕ್ಷೇಪಿಸಿದೆ.


Spread the love

About Laxminews 24x7

Check Also

ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ

Spread the love ಕೋಕಾ-ಕೋಲಾ ಸಂಸ್ಥೆಯೊಂದಿಗೆ ವಿಜಯಪುರವನ್ನು ಕೈಗಾರಿಕಾ ಕೇಂದ್ರವಾಗಿ ಪರಿಗಣಿಸಲು ಸಚಿವ ಎಂ.ಬಿ.ಪಾಟೀಲ ಚರ್ಚೆ ಭಾರತದ ಆಹಾರ ಸಂಸ್ಕರಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ