Breaking News

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 16,505 ಹೊಸ ಕೊರೋನಾ ಪ್ರಕರಣಗಳು ಪತ್ತೆ

Spread the love

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 16,505 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.03 ಕೋಟಿ ಏರಿಕೆಯಾಗಿದೆ.

ದೇಶದಲ್ಲಿ ಸದ್ಯ ಒಟ್ಟು ಸೋಂಕಿತರ ಸಂಖ್ಯೆ 1,03,40,470ಕ್ಕೆ ಏರಿಕೆಯಾಗಿದ್ದು, ಇನ್ನು ನಿನ್ನೆ 19,557 ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 99,46,867ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 2,43,953 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 214 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾಗೆ ಬಲಿಯಾದ ಸೋಂಕಿತರ ಸಂಖ್ಯೆ 1,49,649ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 7,35,978 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ವರೆಗೂ 17,56,35,761 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ