Breaking News

ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ.

Spread the love

ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ. ಶಿಕ್ಷಣ ನೀಡಬೇಕಾದ ಶಿಕ್ಷಕರಿಂದಲೇ ಮಕ್ಕಳ ವಿದ್ಯಾಭ್ಯಾಸಕ್ಕೆ ಕಗ್ಗೋಲೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿವೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾವಡ್ಯಾನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ, ಮಕ್ಕಳ ಕೈಯಲ್ಲಿ ಪೆನ್ನು–ಪುಸ್ತಕ ಬದಲು ಗುದ್ದಲಿ ಮತ್ತು ಸಣಕಿ ನೀಡಿ ಕೆಲಸಕ್ಕೆ ಬಳಕೆ ಮಾಡಲಾಗಿದೆ. ಚಿಕ್ಕಚಿಕ್ಕ ಮಕ್ಕಳಿಂದ ಮಣ್ಣು ಹಾಗೂ ಕಲ್ಲು ತುಂಬಿಸುವ ಕೆಲಸ ಮಾಡಿಸಿಕೊಂಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇದೇ ರೀತಿಯ ಮತ್ತೊಂದು ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೆರಹಟ್ಟಿ ಗ್ರಾಮದಲ್ಲಿರುವ ಪಿಎಂ ಶ್ರೀ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಕನ್ನಡ ಸರ್ಕಾರಿ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಇಲ್ಲಿ ಕೂಡ ಶಿಕ್ಷಕರು ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.
ಸರ್ಕಾರಿ ಶಾಲಾ ಶಿಕ್ಷಕರ ಈ ಅಮಾನವೀಯ ನಡೆಗೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣ ಗಮನಹರಿಸಿ ತನಿಖೆ ನಡೆಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Spread the love

About Laxminews 24x7

Check Also

ಪಣಗುತ್ತಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾದ ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ

Spread the love ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ (ನಿ) ಪಣಗುತ್ತಿ, ತಾ: ಜಿ: ಬೆಳಗಾವಿ ಉದ್ಘಾಟನೆನಮ್ಮ ಯಮಕನಮರಡಿ ವಿಧಾನಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ