Breaking News

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the love

ಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 ಎಕರೆ ಜಮೀನು ಮಂಜೂರುಗೊಳಿಸಿದ್ದು ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿದ್ಯಾಪೀಠವು ಜ್ಞಾನಕೇಂದ್ರವಾಗಿ ಬೆಳೆಯಲಿ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ಶಿವಾನಂದ ಮಠದ ಶ್ರೀ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ ಸರ್ಕಾರದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ 9 ಎಕರೆ ಜಮೀನು ಮಂಜೂರುಗೊಳಿಸಿದ ಹಿನ್ನೆಲೆ ಮಠದ ಆಡಳಿತ ಮಂಡಳಿ ಹಾಗೂ ಸದ್ಭಕ್ತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಘೋಡಗೇರಿಯ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ ಸರ್ಕಾರದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ 9 ಎಕರೆ ಜಮೀನು ಮಂಜೂರಕ್ಕಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಜಮೀನು ಮಂಜೂರುಗೊಳಿಸಿದ್ದೇವೆ. ಕಳೆದ 30 ವರ್ಷಗಳ ರಾಜಕೀಯದಲ್ಲಿ ನಾವು ಮೊದಲ ಪ್ರಾಶಸ್ತ್ಯ ವನ್ನು ಶಿಕ್ಷಣಕ್ಕೆ ನೀಡುತ್ತಿದ್ದೇವೆ. ಕ್ಷೇತ್ರದಲ್ಲಿ 99 % ಶಾಲಾ- ಕಾಲೇಜುಗಳನ್ನು ಅಭಿವೃದ್ಧಿಗೊಳಿಸಿದ್ದು, ಮುಂದೆಯೂ ಈ ಕೆಲಸ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.
ಕಕಮರಿ ಮಠದ ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮೀಜಿ ಮಾತನಾಡಿ, ಮಾತು ಕಡಿಮೆ, ಮೌನ ಬಂಗಾರವೆಂಬ ಗಾದೆ ಮಾತಿನಂತೆ ಕಾರ್ಯ ನಿರ್ಮಹಿಸುತ್ತಿರುವ ಸಚಿವ ಸತೀಶ್‌ ಜಾರಕಿಹೊಳಿ ಅವರು ಮುಂದಿನ ದಿನಗಳಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು. ಅವರು ಮುಖ್ಯಮಂತ್ರಿಯಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿಹೊಂದಲು ಸಾಧ್ಯವಿದೆ. ಸಚಿವರು ಜಾತಿಮೇಲೆ ಯಾವತ್ತು ರಾಜಕಾರಣ ಮಾಡಲಿಲ್ಲ, ಅವರ ಅಭಿವೃದ್ಧಿ ಪರ ನಿಲುವು ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಮುಂದೆಯೂ ಅವರ ಅಭಿವೃದ್ಧಿಪರ ರಾಜಕೀಯಕ್ಕೆ ನಾವೆಲ್ಲರೂ ಸೇರಿ ಶಕ್ತಿ ತುಂಬೋಣ ಎಂದು ಕರೆ ನೀಡಿದರು.
ಶಿವಾನಂದ ಮಠದ ಪರಮಪೂಜ್ಯ ಶ್ರೀ ಮಲ್ಲಯ್ಯ ಮಹಾಸ್ವಾಮೀಜಿ ಮಾತನಾಡಿ, ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 ಎಕರೆ ಸರ್ಕಾರದಿಂದ ಜಮೀನು ಮಂಜೂರುಗೊಳಿಸಿದ ಹಿನ್ನೆಲೆ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಅನಂತ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಯಾರಗುಡ್ಡ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಪಾಟೀಲ್, ಮುಖಂಡರಾದ ಬಸವರಾಜ ಮಟಗಾರ, ರಿಷಬ್ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the loveಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ