ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮನ ಮಿಡಿಯುವ ಘಟನೆ ನಡೆದಿದೆ. ಆಂಬ್ಯುಲೆನ್ಸ್ ಚಾಲಕ ಮಾಡಿರುವ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಮೂಡಿಗೆರೆಯಲ್ಲಿ ಅಸ್ಸಾಂ ಮೂಲದ ಅಸ್ಮಿಯಾ ಆಂಬ್ಯುಲೆನ್ಸ್‌ನಲ್ಲೇ ಹೆರಿಗೆಗೊಳಗಾಗಿದ್ದಾರೆ. ಚಾಲಕ ಆರೀಫ್ ಸಮಯ ಪ್ರಜ್ಞೆಯಿಂದ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿ ಆಸ್ಪತ್ರೆ ತಲುಪಿದ್ದಾರೆ. ಅಂದ ಹಾಗೆ ಇವರು ಅಸ್ಸಾಂ ಮೂಲದ ಕೂಲಿ ಮಾಡುವ ಮಹಿಳೆ. ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ತುಂಬು ಗರ್ಭಿಣಿಯಾಗಿದ್ದರು. ಭಾನುವಾರ ತೀರಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ವೇಳೆ ತೀರಾ ನೋವಿನ ಬಳಲಿಕೆಯಿಂದ ಸೋತಿದ್ದಳು. ಅವಳಾಗಲಿ, ಮಗುವಾಗಲಿ ಉಳಿಯುವ ಸಾಧ್ಯತೆ ತುಂಬಾ ಕಡಿಮೆ ಇರುವ ಸಮಯದಲ್ಲಿ, ದೇವರಂತೆ ಬಂದ ಚಾಲಕ ಮಹಿಳೆಗೆ ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾನೆ.
Laxmi News 24×7