Breaking News

ಆಂಬ್ಯುಲೆನ್ಸ್​ನಲ್ಲಿಯೇ ಹೆರಿಗೆ ಮಾಡಿಸಿದ ಚಾಲಕ,

Spread the love

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮನ ಮಿಡಿಯುವ ಘಟನೆ ನಡೆದಿದೆ. ಆಂಬ್ಯುಲೆನ್ಸ್​ ಚಾಲಕ ಮಾಡಿರುವ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಮೂಡಿಗೆರೆಯಲ್ಲಿ ಅಸ್ಸಾಂ ಮೂಲದ ಅಸ್ಮಿಯಾ ಆಂಬ್ಯುಲೆನ್ಸ್​ನಲ್ಲೇ ಹೆರಿಗೆಗೊಳಗಾಗಿದ್ದಾರೆ. ಚಾಲಕ ಆರೀಫ್ ಸಮಯ ಪ್ರಜ್ಞೆಯಿಂದ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿ ಆಸ್ಪತ್ರೆ ತಲುಪಿದ್ದಾರೆ. ಅಂದ ಹಾಗೆ ಇವರು ಅಸ್ಸಾಂ ಮೂಲದ ಕೂಲಿ ಮಾಡುವ ಮಹಿಳೆ. ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ತುಂಬು ಗರ್ಭಿಣಿಯಾಗಿದ್ದರು. ಭಾನುವಾರ ತೀರಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ವೇಳೆ ತೀರಾ ನೋವಿನ ಬಳಲಿಕೆಯಿಂದ ಸೋತಿದ್ದಳು. ಅವಳಾಗಲಿ, ಮಗುವಾಗಲಿ ಉಳಿಯುವ ಸಾಧ್ಯತೆ ತುಂಬಾ ಕಡಿಮೆ ಇರುವ ಸಮಯದಲ್ಲಿ, ದೇವರಂತೆ ಬಂದ ಚಾಲಕ ಮಹಿಳೆಗೆ ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾನೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ