Breaking News

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the love

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಸಕ್ಕರೆ ಕಾರ್ಖಾನೆಯಿಂದ ತಮಿಳುನಾಡಿಗೆ ಎಥಿನಾಲ್ ಸಾಗಿಸುತ್ತಿದ್ದ ಬೃಹತ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರ ಕ್ರಾಸ್ ಬಳಿ ಇಂದು ಮುಂಜಾನೆ 16 ಚಕ್ರದ ಬೃಹತ್ ಎಥಿನಾಲ್ ಲಾರಿ ಪಲ್ಟಿಯಾಗಿದೆ. ಸ್ಥಳೀಯ ಸಕ್ಕರೆ ಕಾರ್ಖಾನೆಯಿಂದ ಎಥಿನಾಲ್ ಲೋಡ್ ಮಾಡಿಕೊಂಡು ತಮಿಳುನಾಡಿನತ್ತ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಲಾರಿ ಪಲ್ಟಿಯಾಗುತ್ತಿದ್ದಂತೆ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಮಹಾಲಿಂಗಪುರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಪಘಾತದ ತೀವ್ರತೆಗೆ ಎಥಿನಾಲ್ ಸೋರಿಕೆಯಾಗುವ ಭೀತಿ ಎದುರಾಗಿತ್ತು.

ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮವಾಗಿ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಎಥಿನಾಲ್ ಅತ್ಯಂತ ದಹನಕಾರಿ ಪದಾರ್ಥವಾಗಿದ್ದರೂ, ಅಧಿಕಾರಿಗಳ ಸಮಯಪ್ರಜ್ಞೆಯಿಂದ ಯಾವುದೇ ಅಹಿತಕರ ಘಟನೆ ಅಥವಾ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಅವರು ಚಾಲನೆ

Spread the loveರಾಮದುರ್ಗ: ಪ್ರತಿ ವಾರ ನಡೆಯುವ ಶ್ರೇಷ್ಠ ಫೌಂಡೇಶನ್ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಇಂದು ಶಾಸಕ ರಮೇಶ್ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ