Breaking News

ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್‌ ಶೋ ಹಾಗೂ ಮತಯಾಚನೆ ನಡೆಸಿದರು.

Spread the love

ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್‌ ಶೋ ಹಾಗೂ ಮತಯಾಚನೆ ನಡೆಸಿದರು.
ಬಾಗಲಕೋಟೆ: ಉಪಚುನಾವಣೆಯ ಅಂತಿಮ ಹಂತದ ಪ್ರಚಾರ ಜೋರಾಗಿದ್ದು, ಕೊನೆಯ ದಿನ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್‌ ಶೋ ಹಾಗೂ ಮತಯಾಚನೆ ನಡೆಸಿದರು.
ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸಂಚರಿಸಿದ ಸಚಿವರು, ಪಕ್ಷದ ಅಭ್ಯರ್ಥಿಗೆ ಭಾರೀ ಬಹುಮತದೊಂದಿಗೆ ಗೆಲುವು ತಂದುಕೊಡಲು ಮತದಾರರನ್ನು ಮನವಿ ಮಾಡಿದರು. ಅಭಿವೃದ್ಧಿ ಕಾರ್ಯಗಳು, ಸರ್ಕಾರದ ಜನಪರ ಯೋಜನೆಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಯೋಜನೆಗಳ ಬಗ್ಗೆ ಜನರಿಗೆ ವಿವರಿಸಿದರು.
ಪ್ರಚಾರದ ವೇಳೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸಾಹ ತುಂಬಿದರು. ರಸ್ತೆಗಿಳಿದ ಜನಸಾಗರ ಸಚಿವರ ಪರ ಘೋಷಣೆಗಳನ್ನು ಕೂಗಿ ಬೆಂಬಲ ವ್ಯಕ್ತಪಡಿಸಿತು.
“ರಾಜ್ಯದ ಅಭಿವೃದ್ಧಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರಗತಿಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು” ಎಂದು ಸಚಿವರು ಕರೆ ನೀಡಿದರು.

Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಆಟೋ ಚಾಲಕನ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ