Breaking News

ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ; ಪೋಕ್ಸೋ ಕಾಯ್ದೆಯಡಿ ವಿವಾಹಿತ ಮಹಿಳೆಯ ಬಂಧನ!

Spread the love

ಛತ್ತೀಸ್‌ಗಢ,ಏ.08 :- ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಸ್ನೇಹ ಬೆಳೆಸಿ, ಆತನನ್ನು ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ ವಿವಾಹಿತ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಛತ್ತೀಸ್‌ಗಢದ ಕಬೀರಧಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮಹಿಳೆ 16 ವರ್ಷದ ಬಾಲಕನ ಮೇಲೆ ಭಾವನಾತ್ಮಕ ಒತ್ತಡ ಮತ್ತು ಬೆದರಿಕೆ ಹಾಕಿ ಹೋಟೆಲ್‌ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ.
ನಂತರ ಬಾಲಕ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಪೋಷಕರು ಕೊತ್ವಾಲಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸ್ ತ್ವರಿತವಾಗಿ ಕ್ರಮ ಕೈಗೊಂಡು, ಮಹಿಳೆಯನ್ನು ಬಂಧಿಸಿದ್ದಾರೆ.
ಆರೋಪಿ ಮಹಿಳೆ ಮತ್ತು ಸಂತ್ರಸ್ತ ಬಾಲಕ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಪರಿಚಯ ಮಾಡಿಕೊಂಡಿದ್ದು, ಈ ಪರಿಚಯ ಸ್ನೇಹಕ್ಕೆ ತಿರುಗಿದೆ. ಬಳಿಕ ಹೋಟೆಲ್ ನಲ್ಲಿ ಭೇಟಿಯಾಗಲು ನಿರ್ಧರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ