ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್ವೈ ದಿಂದ 7.88 ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಪ್ರಧಾನಮಂತ್ರಿ ಗ್ರಾಮೀಣ ಸಡಕ ಯೋಜನೆ ಅಡಿಯಲ್ಲಿ ಅರಭಾವಿ ಕ್ಷೇತ್ರದ ಮೂರು ಹೊಸ ರಸ್ತೆ ಕಾಮಗಾರಿಗಳಿಗಾಗಿ 7.88 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದ್ದಾರೆ.
ಈ ಬಗ್ಗೆ ಶುಕ್ರವಾರದಂದು ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸುವುದಾಗಿ ಅವರು ತಿಳಿಸಿದರು.
ಅರಭಾವಿ- ಸಂಗನಕೇರಿಯಿಂದ ಫಾರ್ಮಮಡ್ಡಿಯವರೆಗಿನ 2.1 ಕಿ.ಮೀ ರಸ್ತೆ ಕಾಮಗಾರಿಗೆ 1.60 ಕೋಟಿ ರೂಪಾಯಿ, ಶಿವಾಪೂರ(ಹ) ದಿಂದ ಮಹಾಲಿಂಗಪೂರವರೆಗಿನ 3.48 ಕಿ.ಮೀ. ರಸ್ತೆ ಕಾಮಗಾರಿಗೆ 3.16 ಕೋಟಿ ರೂಪಾಯಿ ಮತ್ತು ರಾಜಾಪೂರದಿಂದ ಕಲ್ಲೊಳ್ಳಿವರೆಗಿನ 5.11 ಕಿ.ಮೀ. ರಸ್ತೆ ಕಾಮಗಾರಿಗೆ 3.12 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ . ಒಟ್ಟು 7.88 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಸುಧಾರಣಾ ಕಾಮಗಾರಿಗಳು ಇಷ್ಟರಲ್ಲೇ ನಡೆಯಲಿವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದ್ದಾರೆ.
ರಸ್ತೆಗಳ ಸುಧಾರಣೆಗಾಗಿ ಸರ್ಕಾರದಿಂದ ಅನುದಾನ ಮಂಜೂರಾತಿ ನೀಡಲು ನನ್ನೊಂದಿಗೆ ಕೈ ಜೋಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Satish Jarkiholi #BalachandraJarkiholi
Laxmi News 24×7