Breaking News

ಧಾರವಾಡ ಪ್ರತ್ಯೇಕ ಪಾಲಿಕೆ ಫೈಟ್: ರಾಜ್ಯಪಾಲರ ಅಂಗಳಕ್ಕೆ ತಲುಪಿದ ಹೋರಾಟ; ಬಿಜೆಪಿ ವಿರುದ್ಧ ಸಚಿವ ಲಾಡ್ ವಾಗ್ದಾಳಿ!

Spread the love

• ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ತೀವ್ರಗೊಂಡ ಹೋರಾಟ!
• ಕೇಂದ್ರ ಸಚಿವ ಪ್ರಲ್ಹಾದ ಜೋಷಿ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ!
• ಕ್ಯಾಬಿನೆಟ್‌ನಲ್ಲಿ ಪಾಸ್ ಆದರೂ ವಿಳಂಬವೇಕೆ?; ಸಂತೋಷ್ ಲಾಡ್ ಪ್ರಶ್ನೆ!
• ರಾಜ್ಯಪಾಲರು ರಾಜಕೀಯ ಮಾಡದೇ ನಿಷ್ಪಕ್ಷಪಾತವಾಗಿ ಮಂಜೂರಾತಿ ನೀಡಲಿ!
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಬೇಕೆಂಬ ದಶಕಗಳ ಬೇಡಿಕೆಗೆ ಈಗ ಮತ್ತೆ ಜೀವ ಬಂದಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಷಿ ನೇತೃತ್ವದಲ್ಲಿ ಹೋರಾಟಗಾರರ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಆದರೆ ಈ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಸರ್ಕಾರ ಈಗಾಗಲೇ ಕ್ಯಾಬಿನೆಟ್‌ನಲ್ಲಿ ಇದಕ್ಕೆ ಒಪ್ಪಿಗೆ ನೀಡಿದೆ, ಈಗ ವಿಳಂಬವಾಗುತ್ತಿರುವುದಕ್ಕೆ ಬಿಜೆಪಿಯೇ ಕಾರಣ ಎಂದು ನೇರ ಜರೆದಿದ್ದಾರೆ.
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಆಗ್ರಹಿಸಿ, ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ನೇತೃತ್ವದಲ್ಲಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು. ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸಿ ಧಾರವಾಡಕ್ಕೆ ತನ್ನದೇಯಾದ ಮಹಾನಗರ ಪಾಲಿಕೆಯನ್ನು ರಚಿಸಬೇಕೆಂದು ಹಲವಾರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಪ್ರಸಾದ ಅಬ್ಬಯ್ಯಾ ಕೋನರೆಡ್ಡಿ ಇನ್ನುಳಿದವರು ಒತ್ತಾಯಿಸಿದ ಹಿನ್ನೆಲೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಸಿಎಂ, ಡಿಸಿಎಂ ಗಮನಕ್ಕೆ ತಂದು ಕ್ಯಾಬಿನೆಟ್’ನಲ್ಲಿ ಪಾಸು ಮಾಡಿದ್ದಾರೆ. ಒಂದು ವರ್ಷವಾದ ಹಿನ್ನೆಲೆ ಹೋರಾಟ ಸಮಿತಿಯವರು ಮತ್ತೇ ಒತ್ತಡ ತಂದಿದ್ದು ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಆದರೇ ರಾಜ್ಯಪಾಲರು ಯಾವುದೇ ರಾಜಕೀಯ ಮಾಡದೇ, ನಿಷ್ಪಕ್ಷಪಾತವಾಗಿ ಅದನ್ನು ಮಂಜೂರು ಮಾಡಿಕೊಡಬೇಕು. ಬಿಜೆಪಿಯವರು ತಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಿಲ್ಲ. ಅವರಿಂದಲೇ ತಡವಾಗಿರುವುದು ಜನರಿಗೆ ಅರ್ಥವಾಗಿದೆ ಎಂದರು.

Spread the love

About Laxminews 24x7

Check Also

ಒಂದೇ ಮಳೆಗೆ ನಿರ್ಮಾಣ ಹಂತದ ಸೇತುವೆ ಮುಳುಗಡೆ : ಅಧಿಕಾರಿಗ ಕಾರ್ಯವೈಖರಿಗೆ ಜನ ಆಕ್ರೋಶ

Spread the love ಒಂದೇ ಮಳೆಗೆ ನಿರ್ಮಾಣ ಹಂತದ ಸೇತುವೆ ಮುಳುಗಡೆ : ಅಧಿಕಾರಿಗ ಕಾರ್ಯವೈಖರಿಗೆ ಜನ ಆಕ್ರೋಶ ಬೈಲಹೊಂಗಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ