Breaking News

500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಶನಿ ಮಹದೇವಪ್ಪ ಇನ್ನಿಲ್ಲ..!

Spread the love

ಬೆಂಗಳೂರು : 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶನಿ ಮಹದೇವಪ್ಪ (90) ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಶನಿ ಮಹದೇವಪ್ಪ ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದರೆ , ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಡಾ.ರಾಜ್ ಕುಮಾರ್ ಜೊತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದರು. ಒಟ್ಟಾರೆ ತಮ್ಮ 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇಂದು ಸಂಜೆ 4 ಗಂಟೆಗೆ ಅವರು ವಿಧಿ ವಶರಾಗಿದ್ದು, ನಾಳೆ ಸುಮನಹಳ್ಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ