Breaking News

ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ!

Spread the love

ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ!
ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಭರ್ಜರಿ ಸಿದ್ಧತೆ ಆರಂಭವಾಗಿದೆ. ಮೈತ್ರಿ ಪಕ್ಷಗಳ ನಡುವೆ ಉತ್ತಮ ಸಮನ್ವಯ ಸಾಧಿಸಲು ‘ಗೋವಾ ಮೈತ್ರಿ ಸಮಿತಿ’ ರಚಿಸಲಾಗಿದ್ದು, ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲಾಗಿದೆ.
ಗೋವಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಮೈತ್ರಿ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಹೋಗಲು ‘ಗೋವಾ ಮೈತ್ರಿ ಸಮಿತಿ’ಯನ್ನು ರಚಿಸಿದೆ.
ಈ ಪ್ರಸ್ತಾವನೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ ಪ್ರಮುಖ ೬ ಸದಸ್ಯರ ಸಮಿತಿಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಸದಸ್ಯೆಯಾಗಿ ನೇಮಕ ಮಾಡಲಾಗಿದೆ. ಈಗಾಗಲೇ ಗೋವಾ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ವಹಿಸಿಕೊಂಡು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರಿಗೆ, ಈಗ ಮೈತ್ರಿ ಸಮಿತಿಯ ಜವಾಬ್ದಾರಿಯನ್ನೂ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ದೊಡ್ಡ ಹೊಣೆಗಾರಿಕೆಯನ್ನು ನೀಡಿದೆ.

Spread the love

About Laxminews 24x7

Check Also

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

Spread the loveಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ