Breaking News

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ

Spread the love

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ
ಬೆಂಗಳೂರು, ಆ. 6: ಕಾಹೇರ್ (KAHER) ಕುಲಾಧಿಪತಿ ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಪ್ರಭಾಕರ ಬಿ. ಕೋರೆ ಅವರು ಇಂದು ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಇತ್ತೀಚೆಗೆ ನಿಧನರಾದ ಅವರ ಧರ್ಮಪತ್ನಿ ಶ್ರೀಮತಿ ಚಿನ್ನಮ್ಮ ದೇವೇಗೌಡ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಚಿನ್ನಮ್ಮ ಅವರ ನಿಧನವು ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಸಾರ್ವಜನಿಕ ಬದುಕಿಗೆ ಅಪಾರ ನಷ್ಟವಾಗಿದೆ ಎಂದು ಡಾ. ಕೋರೆ ಅಭಿಪ್ರಾಯಪಟ್ಟರು. ಚಿನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದೇವೇಗೌಡರು ಮತ್ತು ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.
ಬಳಿಕ ದೇವೇಗೌಡರ ಆರೋಗ್ಯವನ್ನು ವಿಚಾರಿಸಿದ ಡಾ. ಕೋರೆ, ಅವರೊಂದಿಗೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ಸಹ ಉಪಸ್ಥಿತರಿದ್ದರ

Spread the love

About Laxminews 24x7

Check Also

ಶಿಕ್ಷಣದ ದೇಗುಲ ಕಳಂಕ: ಕ್ಲಾಸ್‌ರೂಮ್‌ನಲ್ಲೇ ಶಿಕ್ಷಕ-ಶಿಕ್ಷಕಿ ರೊಮ್ಯಾನ್ಸ್, ಹೆಂಡತಿ ಇಟ್ಟಿದ್ದ ಹಿಡನ್ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ ಕಾಮುಕ!

Spread the love ಶಿಕ್ಷಣದ ದೇಗುಲ ಕಳಂಕ: ಕ್ಲಾಸ್‌ರೂಮ್‌ನಲ್ಲೇ ಶಿಕ್ಷಕ-ಶಿಕ್ಷಕಿ ರೊಮ್ಯಾನ್ಸ್, ಹೆಂಡತಿ ಇಟ್ಟಿದ್ದ ಹಿಡನ್ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ ಕಾಮುಕ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ