Breaking News

ಬೆಳಗಾವಿ | ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ: ಆರೋಪಿ ಬಂಧನ

Spread the love

ಬೆಳಗಾವಿ: ನಗರದಲ್ಲಿ ಗಾಂಜಾ ಮಿಶ್ರಿತ ಮಾದಕ ವಸ್ತುವಿನ ಚಾಕೊಲೇಟ್ ಪ್ಯಾಕೆಟ್‌ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉದ್ಯಮಬಾಗ ಪೊಲೀಸ್‌ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಭೋಲು ಪ್ರಜಾಪತಿ (39) ಬಂಧಿತ ಆರೋಪಿ. ಬೆಳಗಾವಿ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಮುಂಭಾಗದ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಗಾಂಜಾ ಮಿಶ್ರಿತ ಮಾದಕ ವಸ್ತುವಿನ ಚಾಕೊಲೇಟ್ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಸಹಾಯಕ ಪೊಲೀಸ್ ಆಯುಕ್ತ ಶೇಖರಪ್ಪ ಹೆಚ್., ಖಡೇಬಜಾರ ಅವರ ಮಾರ್ಗದರ್ಶನದಲ್ಲಿ ಉದ್ಯಮಬಾಗ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಮಹಾಂತೇಶ ವಿ. ಹೊಸಪೇಟೆ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯ ವಶದಲ್ಲಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಪ್ರಕಾರ, 54,000 ಮೌಲ್ಯದ 6 ಕೆ.ಜಿ. 858 ಗ್ರಾಂ ತೂಕದ ಗಾಂಜಾ ಮಿಶ್ರಿತ ಮಾದಕ ವಸ್ತುವಿನ 27 ಚಾಕೊಲೇಟ್ ಪ್ಯಾಕೆಟ್‌ಗಳು, 10,000 ಮೌಲ್ಯದ ಮೊಬೈಲ್ ಫೋನ್, 600 ನಗದು ಹಾಗೂ 30,000 ಮೌಲ್ಯದ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 94,600 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ ದಾಖಲಿಸಿಕೊಂಡು, ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತ ಭೂಬೋರಸೆ, ಉಪ ಪೊಲೀಸ್ ಆಯುಕ್ತ ನಾರಾಯಣ ಭರಮನಿ ಹಾಗೂ ಉಪ ಪೊಲೀಸ್ ಆಯುಕ್ತರು ಅವರು ಶಾಘಿಸಿದ್ದಾರೆ.

Spread the love

About Laxminews 24x7

Check Also

ರಾಜ್ಯ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿನ 3 ಹಾಗೂ ಫೈವ್​ ಸ್ಟಾರ್ ಹೋಟೆಲ್​ಗಳಲ್ಲಿ ಆಹಾರ ಮಾದರಿಗಳ ಪರಿಶೀಲನೆ

Spread the loveಬೆಂಗಳೂರು: ರಾಜ್ಯ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿನ 3 ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ