Breaking News

ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು

Spread the love

ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು
ಕುಮಟಾ: ರಾಷ್ಟ್ರೀಯ ಹೆದ್ದಾರಿ 66 ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಬರ್ಗಿ ಸಮೀಪದ ಸರ್ಕಾರಿ ಪ್ರೌಢಶಾಲೆ ಬಳಿ ಸೋಮವಾರ ನಡೆದಿದೆ.
ಮೃತರನ್ನು ಕುಮಟಾ ಶಶಿಹಿತ್ಲ ನಿವಾಸಿ ದುರ್ಗಿ ಮಾದೇವ ಹರಿಕಾಂತ (62) ಎಂದು ಗುರುತಿಸಲಾಗಿದೆ. ದುರ್ಗಿ ಅವರು ಬರ್ಗಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಲು ಕುಮಟಾದಿಂದ ಬಂದು ಬರ್ಗಿಯಲ್ಲಿ ಬಸ್ ಇಳಿದಿದ್ದರು. ಬಳಿಕ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರು ಸರ್ಕಾರಿ ಪ್ರೌಢಶಾಲೆ ಸಮೀಪ ಹೆದ್ದಾರಿ ದಾಟಲು ಮುಂದಾಗಿದ್ದರು ಎನ್ನಲಾಗಿದೆ.
ಈ ವೇಳೆ ಕುಮಟಾ ಕಡೆಯಿಂದ ಗೋಕರ್ಣದತ್ತ ತೆರಳುತ್ತಿದ್ದ ಕಾರು ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ದುರ್ಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದವರು ಸಿದ್ದಾಪುರದಿಂದ ಗೋಕರ್ಣದತ್ತ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬರ್ಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪದೇಪದೆ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ವಾಹನಗಳ ವೇಗ ನಿಯಂತ್ರಣ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಐಆರ್‌ಬಿ ಕಂಪನಿ ಹಾಗೂ ಪೊಲೀಸ್ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Spread the love

About Laxminews 24x7

Check Also

ಚುನಾವಣಾ ಆಯೋಗದ ಪರ ಸಮರ್ಥನೆ – ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

Spread the loveಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಭಿನ್ನಾಭಿಪ್ರಾಯವಿರುವ ಕಾರಣ ಚುನಾವಣಾ ಆಯೋಗವನ್ನು ಸಮರ್ಥನೆ ಮಾಡಿಕೊಳ್ತಿರುವ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ