Breaking News

ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ, ಪಕ್ಷ ಗುರುತಿಸಬೇಕು: ಸಚಿವ ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಡಿಸಿಎಂ ಸ್ಥಾನ ನೀಡುತ್ತಾರೆ ಅಂತಾ ಚರ್ಚೆ ಆಗಿದ್ದು ನಿಜ. ಸದ್ಯಕ್ಕೆ ಮಾಡಿಲ್ಲ. ಮುಂದಿನ ದಿನದಲ್ಲಿ ಪಕ್ಷ ಮಾಡಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಬೇಡಿಕೆ ಇಟ್ಟಿರಲಿಲ್ಲ. ಪಕ್ಷದ ಹಿತದೃಷ್ಟಿಯಿಂದ ಚರ್ಚೆ ನಡೆಯುತ್ತಿತ್ತು. ನಾವು ಒತ್ತಡ ಹಾಕಲ್ಲ ಪಕ್ಷ ಗುರುತಿಸಬೇಕಾಗುತ್ತದೆ. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಹೊರಗಡೆ ಚರ್ಚೆ ಮಾಡುವುದು ಸರಿಯಲ್ಲ ಎಂದರು.

ಸತೀಶ್ ಜಾರಕಿಹೊಳಿ‌ ಖಾತೆ ಬದಲಾವಣೆ ಮಾಡುತ್ತಾರೆ ಎಂಬ ಪ್ರಶ್ನೆಗೆ ನಾನು ಯಾವುದೂ ಕೇಳಿಲ್ಲ. ಖಾತೆ ಬದಲಾವಣೆ ಬಗ್ಗೆ ಚರ್ಚೆಯೇ ಆಗಿಲ್ಲ. ಅದು ಪಕ್ಷದ ತೀರ್ಮಾನ, ಯಾರಿಗೆ ಯಾವ ಖಾತೆ ಕೊಡುತ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು ಎಂದು ಪ್ರತಿಕ್ರಿಯೆ ನೀಡಿದರು.

ಸಂಪುಟದಲ್ಲಿ ಮಹಿಳಾ ಸಚಿವರು ಇಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ, ಮಹಿಳಾ ಶಾಸಕರಿಗೆ‌ ಕೊಡಲು ಒಂದು ಸ್ಥಾನ ಖಾಲಿ ಇಟ್ಟಿದ್ದೇವೆ. ಅದನ್ನು ಸರಿ ಮಾಡಲು ಇಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿ​ಗೆ ಕೊಡಬೇಕು ಅಂತಾ ಸಾಕಷ್ಟು ಬಾರಿ ಹೇಳಿದ್ದೇವೆ. ಅವರು ಸೀನಿಯರ್ ಇದ್ದಾರೆ. ಹಾಗಾಗಿ, ಅವರಿಗೆ ಕೊಡಬೇಕು ಅಂತಾ ಹೇಳಿದ್ದೇವೆ ಎನ್ನುವ ಮೂಲಕ ಹೆಬ್ಬಾಳ್ಕರ್ ಪರ ಬ್ಯಾಟಿಂಗ್ ಬೀಸಿದರು.

ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿ ಇದ್ದಾರೆ. ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ ಅಂತಾ ಹೇಳಿದ್ದಾರೆ. ಸಂಪುಟ ವಿಸ್ತರಣೆ ವೇಳೆ ಸಿದ್ದರಾಮಯ್ಯ ಅವರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂಬ ಆರೋಪಕ್ಕೆ ಅದನ್ನು ಸರಿ ಮಾಡಲು ಒಂದು ಸ್ಥಾನ ಖಾಲಿ ಇಟ್ಟಿದ್ದಾರೆ. ಹೈಕಮಾಂಡ್ ಚರ್ಚೆ ಮಾಡಿ ಸರಿ ಮಾಡುತ್ತಾರೆ ಎಂದು ಹೇಳಿದರು.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ, 10ಕ್ಕೂ ಹೆಚ್ಚು ಮೊಬೈಲ್‌ ಜಪ್ತಿ

Spread the loveಬೆಂಗಳೂರು: ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಆರೋಪದ ಮೇರೆಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ 80ಕ್ಕೂ ಹೆಚ್ಚು ಮಂದಿ ಅಧಿಕಾರಿ-ಸಿಬ್ಬಂದಿ ಪರಪ್ಪನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ