Breaking News
Home / ಜಿಲ್ಲೆ / ಬೆಂಗಳೂರು / ಸಚಿವ ಭೈರತಿ ಬಸವರಾಜ ಬೆಳಗಾವಿಗೆ

ಸಚಿವ ಭೈರತಿ ಬಸವರಾಜ ಬೆಳಗಾವಿಗೆ

Spread the love

ಬೆಂಗಳೂರು – ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಮಹಾನಗರಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಬುಧವಾರ, ಗುರುವಾರ ಮತ್ತು ಶುಕ್ರವಾರ ಅವರು ತುಮಕೂರು, ಹುಬ್ಬಳ್ಳಿ -ಧಾರವಾಡ ಹಾಗೂ ಬೆಳಗಾವಿ ಮಹಾನಗರದ ಸ್ಮಾರ್ಟ್ ಸಿಟಿ ಕಾಮಗಾರಿ, ಮಹಾನಗರ ಪಾಲಿಕೆ ಅಭಿವೃದ್ಧಿ ಯೋಜನೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಪರಿಶೀಲನೆ ನಡೆಸುವರು.

ಬುಧವಾರ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ತುಮಕೂರು ನಗರದ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಮಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ.

ನಂತರ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡುವರು. ಗುರುವಾರ ಬೆಳಗ್ಗೆ 7 ಗಂಟೆಯಿಂದ ಹುಬ್ಬಳ್ಳಿ ನಗರದ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಮಧ್ಯಾಹ್ನ 2 ಗಂಟೆಯವರೆಗೆ ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಯೋಜನೆ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಸಂಜೆ 4.30ಕ್ಕೆ ಬೆಳಗಾವಿಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ, ಬಿಜೆಪಿ ಕಚೇರಿಗೆ ಭೇಟಿ ನೀಡುವರು.

ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ನಗರದ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸುವರು. ನಂತರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು.

ಶುಕ್ರವಾರ ರಾತ್ರಿ 7.25ಕ್ಕೆ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವರು.

 


Spread the love

About Laxminews 24x7

Check Also

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ