Breaking News

ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ

Spread the love

ಮಂಡ್ಯ: ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ ನಡೆಸಲಾಯಿತು. ವಿವಿಧ ಮಠಾಧೀಶರು ನಿಧಿ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಭಾಗವಹಿಸಿ ನಿಧಿ ಸಂಗ್ರಹದ ಬಗ್ಗೆ ಪರಸ್ಪರ ಚರ್ಚೆ ನಡೆಸಿದರು.

ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ನಮ್ಮ ಮಠ ಮತ್ತು ಎಲ್ಲ ಶಾಖಾ ಮಠಗಳು ರಾಮಮಂದಿರ ನಿರ್ಮಾಣಕ್ಕೆ ಸಂಪೂರ್ಣವಾಗಿ ಸಹಕರಿಸುತ್ತವೆ ಎಂದರು. ಪೇಜಾವರ ಶ್ರೀಗಳು ಮಾತನಾಡಿ, ಶ್ರೀರಾಮನ ಗುಣಗಳನ್ನು ನಾವೆಲ್ಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಪ್ರಚಾರಕ ಸುಧೀರ್ ಮಾತನಾಡಿ, ರಾಮಜನ್ಮಭೂಮಿ 492 ವರ್ಷಗಳ ಹೋರಾಟ. ಈ ಅಭಿಯಾನ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ