Breaking News

ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

Spread the love

ಬೆಂಗಳೂರು, ಜ.7- ಬಿಬಿಎಂಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಯ್ಯಾಲಿಕಾವಲ್‍ನ ಕೋದಂಡರಾಮಪುರದ 12ನೆ ಕ್ರಾಸ್‍ನಲ್ಲಿ ವಾಸವಾಗಿದ್ದ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರರು ಎಂದು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಗೆಳೆಯರ ಬಳಗದಲ್ಲಿರುವ ಡಾ.ರಾಜ್‍ಕುಮಾರ್ ಒಳಾಂಗಣ ಕ್ರೀಡಾಂಗಣದ ಕಚೇರಿಯ ಕಿಟಕಿ ಕಂಬಿಗೆ ಕೃಷ್ಣರಾಜು ಅವರು ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 4 ರಿಂದ 8 ಗಂಟೆ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿರಬಹುದುದೆಂದು ಹೇಳಲಾಗಿದೆ. ವಿಷಯ ತಿಳಿದ ನಂತರ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ