Home / Uncategorized / ರಮೇಶ್ ಜಾರಕಿಹೊಳಿ ವಾಗ್ದಾಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮೌನ!

ರಮೇಶ್ ಜಾರಕಿಹೊಳಿ ವಾಗ್ದಾಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮೌನ!

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಜಕಾರಣ ಅತ್ಯಂತ ಪ್ರತಿಷ್ಠೆ, ಜಿದ್ಧಾಜಿದ್ದಿಗೆ ಹೆಸರುವಾಸಿಯಾಗಿದೆ. ಸದ್ಯ ಈ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಬ್ಬರು ಪ್ರಬಲರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಸಚಿವ ರಮೇಶ್ ಜಾರಕಿಹೊಳಿಯನ್ನು ಸೋಲಿಸಬೇಕು ಎಂದು ಹಠ ಹಿಡಿದಿದ್ದು, ಸಚಿವ ಜಾರಕಿಹೊಳಿಯನ್ನು ಕಟ್ಟಿಹಾಕಲು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಂತ್ರ, ಪ್ರತಿತಂತ್ರಗಳು ಆರಂಭವಾಗಿವೆ.

ಬೆಳಗಾವಿ ಗ್ರಾಮೀಣ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆಯುವ ಬಿರುಸಿನ ಹೋರಾಟಕ್ಕೆ ಈ ಬಾರಿ ಸಾಕ್ಷಿಯಾಗಲಿದೆ. ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪವರ್ ಫುಲ್ ಆಗಿದ್ದು, ಅವರನ್ನು ಸೋಲಿಸಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ಪಣ ತೊಟ್ಟಿದ್ದಾರೆ. ಕಳೆದ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ಸಚಿವ ರಮೇಶ ಜಾರಕಿಹೊಳಿ ವಹಿಸಿದ್ದರು. ಆದರೆ ನಂತರ ನಡೆದ ಬೆಳವಣಿಗೆಗಳು ಇಬ್ಬರನ್ನು ಬದ್ಧ ವೈರಿಗಳು ಆಗುವಂತೆ ಮಾಡಿದೆ.  ಮುಂದಿನ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಇಬ್ಬರು ಜಿದ್ದಿಗೆ ಬಿದ್ದಿದ್ದಾರೆ.ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಾರಕಿಹೊಳಿ, ಹೆಬ್ಬಾಳ್ಕರ್ ಬೆಂಬಲಿಗರು ಪರಸ್ಪರ ಪೈಪೋಟಿ ನಡೆಸಿದ್ದರು. ಗ್ರಾಮೀಣದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಗೆದ್ದಿದ್ದಾರೆ ಎಂದು ಶಾಸಕಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ಮಾಡೋ ಸವಾಲ್ ಹಾಕಿದ್ದಾರೆ.2023ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಸಚಿವ ರಮೇಶ ಜಾರಕಿಹೊಳಿ ಸವಾಲ್ ಹಾಕಿದ್ದಾರೆ. ಅಷ್ಟೇ ಅಲ್ಲ ಯಾರ ವಿರುದ್ಧವೂ ಷಡ್ಯಂತ್ರ ಮಾಡುತ್ತಿಲ್ಲ, ವಿರೋಧಿಗಳನ್ನು ಸೋಲಿಸಲು ಪ್ರಯತ್ನ ನಡೆಸುವುದರಲ್ಲಿ ತಪ್ಪೇನೂ ಇಲ್ಲ. ಗೋಕಾಕ್, ಅರಬಾವಿ ಮಾದರಿಯಲ್ಲಿ ಪಕ್ಷ ಸಂಘಟನೆಯನ್ನು ಗ್ರಾಮೀಣ ಕ್ಷೇತ್ರದಲ್ಲಿ ಮಾಡುತ್ತೇವೆ. ಕ್ಷೇತ್ರದಲ್ಲಿ ಯಾರೇ ಗೆದ್ದಿರಬಹುದು ಆದರೆ, ಈ ಕ್ಷೇತ್ರ ನನ್ನದು. ಹಿರೇಬಾಗೇವಾಡಿ ಗ್ರಾಮದಲ್ಲಿ ವಿಶ್ವ ವಿದ್ಯಾಲಯ ಸ್ಥಾಪನೆ ಹಿನ್ನೆಯಲ್ಲಿ ಕರೆ ಅಭಿವೃದ್ಧಿ ಸಾಧ್ಯವಾಗಿಲ್ಲ. ಶೀಘ್ರದಲ್ಲಿ ಬೇರೆ ಕಡೆ ಯೋಜನೆಯನ್ನು ರೂಪಿಸಿ ಜನರಿಗೆ ಅನ್ಯಾಯವಾಗಂತೆ ನೋಡಿಕೊಳ್ಳುತ್ತೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ