Breaking News

ಯುವರಾಜ್ ವಂಚನೆ ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್

Spread the love

ಬೆಂಗಳೂರು; ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಪ್ರಭಾವಿಗಳಿಗೂ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಮೇಲೆ ಯುವರಾಜ್ ಎಂಬಾತನನ್ನು ಸಿಸಿಬಿ ಬಂಧಿಸಿದೆ. ಸಿಸಿಬಿ ವಶದಲ್ಲಿರುವ ಯುವರಾಜ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯುತ್ತಿದೆ. ಈ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿರಾಜ್​ ಅವರ ಹೆಸರು ಕೇಳಿ ಬಂದಿದೆ.  ಈ ಹಿಂದೆ ಸಿಸಿಬಿ ಪೊಲೀಸರು ನಟಿ ರಾಧಿಕಾ ಅವರ ಸಹೋದರ ರವಿರಾಜ್​ ಅವರನ್ನು ಪ್ರಕರಣದ ಸಂಬಂಧ ವಿಚಾರಣೆಗೆ ಕರೆದಿದ್ದರು. ಇದೀಗ ಈ ಪ್ರಕರಣ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ಸಿಸಿಬಿ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನಟಿ ರಾಧಿಕಾ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ. ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ರಾಧಿಕಾ ಕುಮಾರಸ್ವಾಮಿ ಅವರು ನೆನ್ನೆ ಸುದ್ದಿಗೋಷ್ಠಿ ನಡೆಸಿ, ಸಿನಿಮಾ ಮಾತುಕತೆ ಹೊರತಾಗಿ ಯುವರಾಜ್​ ಹಾಗೂ ನನ್ನ ನಡುವೆ ಯಾವುದೇ ವ್ಯವಹಾರ ನಡೆದಿಲ್ಲ. ಈ ಸಂಬಂಧ ಸಿಸಿಬಿ ಪೊಲೀಸರು ವಿಚಾರಣೆ ಕರೆದರೆ ಹೋಗುವುದಾಗಿ ಸ್ಪಷ್ಟ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ