Breaking News

ಜ.22ರವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಸ್ತರಣೆ

Spread the love

ಧಾರವಾಡ : ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ​ಗೌಡ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ, ಜೈಲು ಸೇರಿರುವಂತ ಮಾಜಿ ಸಚಿವ ವಿನಯ್​ ಕುಲಕರ್ಣಿ ಇಂದು ಜಾಮೀನು ದೊರೆತಿಲ್ಲ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

ಇಂದು ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಳ್ಳುತ್ತಿತ್ತು. ಈ ಹಿನ್ನಲೆಯಲ್ಲಿ ಮತ್ತೆ ಕೋರ್ಟ್ ಗೆ ಅವರನ್ನು ಹಾಜರುಪಡಿಸಲಾಗಿತ್ತು.

ಇಂತಹ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಧಾರವಾಡ ಸಿಬಿಐ ವಿಶೇಷ ಕೋರ್ಟ್, 2 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಬಂಧನದ ಅವಧಿಯನ್ನು ಇನ್ನೂ 14 ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಲಾಗಿದೆ. ಜನವರಿ 22ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ, ಧಾರವಾಡದ ಸಿಬಿಐ ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ

Spread the love ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ