Breaking News

ಬೆಂಗಳೂರಿನ ಸ್ಲಿಪ್ ಕಾರ್ಟ್ ಮತ್ತು ಸ್ವಿಗ್ಗಿ ಸಂಸ್ಥೆಗಳ ಮೇಲೆ ಐಟಿ ದಾಳಿ

Spread the love

ಬೆಂಗಳೂರು : ಇಂದು ಸ್ಲಿಪ್ ಕಾರ್ಟ್ ಮತ್ತು ಸ್ವಿಗ್ಗಿ ಸಂಸ್ಥೆಗಳ ಬೆಂಗಳೂರಿನ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಶೋಧಿಸಿದರು. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಸ್ಥಳೀಯವಾಗಿ ಆಹಾರ ವಿತರಣೆ ಮಾಡುವ ಸ್ವಗ್ಗಿ ಹಾಗೂ ಅಮೆರಿಕದ ವಾಲ್‌ಮಾರ್ಟ್ ಒಡೆತನದ ಫಿಪ್‌ಕಾರ್ಟ್ ಯಲ್ಲಿ ಮೂರನೇ ವ್ಯಕ್ತಿಗಳಿಂದ ತೆರಿಗೆ ವಂಚನೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ ಎನ್ನಲಾಗಿದೆ.

ಪ್ಲಿಪ್‌ಕಾರ್ಟ್‌ನ ಲಾಜಿಸ್ಟಿಕ್ಸ್ ಅಂಗವಾಗಿರುವ ಇನ್ಸ್ ಟಾಕಾರ್ಟ್ ಸಂಸ್ಥೆಯ ಕಚೇರಿಯಲ್ಲಿ ಜನವರಿ 7ರ ರಾತ್ರಿ ವೇಳೆ ಶೋಧಕಾರ್ಯ ನಡೆಸಲಾಗಿತ್ತು. ಸುಮಾರು 20 ಅಧಿಕಾರಿಗಳ ತಂಡ ಈ ಕಚೇರಿಗೆ ಭೇಟಿ ಕೊಟ್ಟು ಕಂಪನಿಯ ವ್ಯಾಪಾರ ವಹಿವಾಟಿನ ಕುರಿತು ಪರಿಶೀಲನೆ ನಡೆಸಿತು.

ಈ ಬಗ್ಗೆ ಹೇಳಿಕೆ ನೀಡಿರುವ ಪ್ಲಿಪ್‌ಕಾರ್ಟ್ ಸಂಸ್ಥೆ, ತಮ್ಮ ಕಂಪನಿ ಎಲ್ಲಾ ರೀತಿಯ ತನಿಖೆಗೆ ಸಹಕಾರ ನೀಡಿ ಮಾಹಿತಿಯನ್ನು ನೀಡಲಾಗಿದೆ ಎಂದಿದೆ. ಅಷ್ಟೇ ಅಲ್ಲದೆ, ಸ್ವಿಗ್ಗಿ ಕೂಡ ತೆರಿಗೆ ವಂಚನೆ ಮಾಡಿಲ್ಲ ಎಂದು ಹೇಳಿಕೊಂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ