Breaking News
Home / ರಾಜಕೀಯ / ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ ಹಾಗೂ ಕಾನ್ಸ್ಟೇಬಲ್

ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ ಹಾಗೂ ಕಾನ್ಸ್ಟೇಬಲ್

Spread the love

ಬೆಂಗಳೂರು: ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದ ರೆವಿನ್ಯೂ‌ಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್​ಟೇಬಲ್ ರಾಜು ಎಂಬುವವರನ್ನು ಎಸಿಬಿ ಅಧಿಕಾರಿಗಳು ಭರ್ಜರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು ಆರ್ ಐ ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್​ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಇದಕ್ಕೆ ಬಗ್ಗದ ಸದರಿ ಜಮೀನು ಮಾಲೀಕ, ಎಸಿಬಿಗೆ ದೂರು ನೀಡಿದ್ದರು. ದೂರುದಾರ ಕೊಟ್ಟ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ಬೀಸಿದ ಜಾಲಕ್ಕೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ. ಈ ವೆಳೆಗೆ, ಹೆಡ್ ಕಾನ್ಸ್​ಟೇಬಲ್ ರಾಜುಗೆ ಹಣ ಪಡೆಯುವಂತೆ ಇನ್ಸ್​ಪೆಕ್ಟರ್ ಸೂಚಿಸಿದ್ದರು ಎಂದು ಹೇಳಿದ್ದು ಚಿಕ್ಕಜಾಲ ಇನ್ಸ್​ಪೆಕ್ಟರ್ ಯಶವಂತ್ ವಿರುದ್ಧ ಕೂಡ ಆರೋಪಗಳು ಕೇಳಿಬರುತ್ತದೆ. ರಾಜು ಹಾಗೂ ಆರ್ ಐ ಹನುಮಯ್ಯರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಇನ್ನೊಂದೆಡೆ, ಹಣ ಪಡೆಯುವಂತೆ ಸೂಚಿಸಿದ್ದ ಆರೋಪ ಹೊತ್ತಿರುವ ಇನ್ಸ್​ಪೆಕ್ಟರ್ ಯಶವಂತ್ ಠಾಣೆಯಿಂದ ನಾಪತ್ತೆಯಾಗಿದ್ದಾರೆ. ಇನ್ಸ್​ಪೆಕ್ಟರ್ ಯಶವಂತ್​ಗಾಗಿ ಹುಡುಕಾಟ ಶುರುವಾಗಿದೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ