ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
ಇಡೀ ಗೋಡನ್ ಗೆ ಬೆಂಕಿ ತಗುಲಿದ್ದು, ಈಗಾಗಲೇ ಐದಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ನಡೆದ ಅಗ್ನಿ ಅವಘಡ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.
Laxmi News 24×7