Breaking News

ಯಶ್ ಗೆ ವಿಶ್ ಮಾಡಿದ ಹೃತಿಕ್ ರೋಷನ್

Spread the love

ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 34ನೇ ವಸಂತಕ್ಕೆ ಕಾಲಿಟ್ಟಿರುವ ಯಶ್ ಕುಟುಂಬದವರು ಮತ್ತು ಆಪ್ತರ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬದ ಆಚರಣೆ ಸರಳವಾಗಿದ್ದರೂ, ಕೆಜಿಎಫ್-2 ಟೀಸರ್ ಅಭಿಮಾನಿಗಳ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.

KGF 2 ಟೀಸರ್ ನೋಡಿ ಫಿದಾ ಆದ್ರು ಪರಭಾಷೆಯ ಸ್ಟಾರ್ ಗಳು | Filmibeat Kannada

ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗದ ಗಣ್ಯರು ವಿಶ್ ಮಾಡುತ್ತಿದ್ದಾರೆ. ರಾಕಿ ಭಾಯ್ ಗೆ ಬೇರೆ ಬೇರೆ ಚಿತ್ರರಂಗದ ಗಣ್ಯರು ಸಹ ಶುಭಾಶಯ ತಿಳಿಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಸ್ಟಾರ್ ಕಲಾವಿದರು ರಾಕಿಂಗ್ ಸ್ಟಾರ್ ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಯಶ್ ಹವಾ ಈಗ ಕರ್ನಾಟಕದಲ್ಲಿ ಮಾತ್ರವಲ್ಲದೇ ಬಾಲಿವುಡ್ ವರೆಗೂ ವಿಸ್ತರಿಸಿದೆ. ಕೆಜಿಎಫ್ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಯಶ್ ಗೆ ಬಾಲಿವುಡ್ ಮಂದಿ ಸಹ ಫಿದಾ ಆಗಿದ್ದಾರೆ. ಇದೀಗ ಯಶ್ ಹುಟ್ಟುಹಬ್ಬಕ್ಕೆ ಬಾಲಿವುಡ್ ಸ್ಟಾರ್ ನಟ ಹೃತಿಕ್ ರೋಷನ್ ವಿಶ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಹೌದು, ಬಾಲಿವುಡ್ ಗ್ರೀಕ್ ಗಾಡ್ ಹೃತಿಕ್ ರೋಷನ್ ಕೆಜಿಎಫ್-2 ಚಿತ್ರದ ಟೀಸರ್ ಶೇರ್ ಮಾಡಿ, ‘ಎಂಥ ಅದ್ಭುತ ಟ್ರೈಲರ್. ಸಿನಿಮಾತಂಡಕ್ಕೆ ಅಭಿನಂದನೆಗಳು. ಹುಟ್ಟುಹಬ್ಬದ ಶುಭಾಶಯಗಳು ಯಶ್’ ಎಂದು ಟ್ವೀಟ್ ಮಾಡಿದ್ದಾರೆ.

ಹೃತಿಕ್ ರೋಷನ್ ವಿಶ್ ಮಾಡುತ್ತಿದ್ದಂತೆ ಅಭಿಮಾನಿಗಳು ಇಬ್ಬರು ಒಟ್ಟಿಗೆ ಸಿನಿಮಾ ಮಾಡುವ ಯೋಜನೆ ನಡೆಯುತ್ತಿದೆಯಾ ಎನ್ನವ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಂದಹಾಗೆ ಹೃತಿಕ್ ಮತ್ತು ಯಶ್ ಇಬ್ಬರು ಒಟ್ಟಿಗೆ ಸಿನಿಮಾ ಮಾಡಿದರೂ ಅಚ್ಚರಿ ಇಲ್ಲ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿ ಕೊಂಡಿರುವ ಯಶ್ ಗೆ ಕರ್ನಾಟಕದಲ್ಲಿ ಮಾತ್ರವಲ್ಲದೆ ಬಾಲಿವುಡ್ ನಲ್ಲೂ ಸಖತ್ ಬೇಡಿಕೆ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ಅಭಿಮಾನಿಗಳ ಅನುಮಾನ ನಿಜವಾದರೂ ಅಚ್ಚರಿ ಇಲ್ಲ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ